ಉದಯರಶ್ಮಿ ದಿನಪತ್ರಿಕೆ
ಚಡಚಣ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ, ಯುನಿಸೆಫ್ ಸಂಸ್ಥೆಯ ಮತ್ತು ಶ್ರೀ ಸಂಗಮೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಸಹಯೋಗದೊಂದಿಗೆ ಜೀವಜಲ ಸಂರಕ್ಷಿಸುವುದು ಹೇಗೆ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಚಾರ್ಯ ಡಾ ಎಸ್.ಬಿ.ರಾಠೋಡ ಮಾತನಾಡಿ, ಭೂಮಿ ಮೇಲಿನ ಅಮೂಲ್ಯ ಸಂಪತ್ತಾದ ನೀರನ್ನು ಮಿತವಾಗಿ ಬಳಸುವ ಮೂಲಕ ಮುಂದಿನ ಪೀಳಿಗೆಗೆ ಉಳಿಸಬೇಕಿದೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆಯ ವಿಜಯಪುರ ಜಿಲ್ಲೆಯ ನೀರು ಉಳಿಸಿ ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಹಣಮಂತ ಪಿ ಮಾತನಾಡಿ, ಈ ಕಾರ್ಯಕ್ರದಡಿಯಲ್ಲಿ ಸೇವ್ ವಾಟರ್ (save water) ಅಪ್ಲಿಕೇಶನ್ ಅಭಿವೃದ್ಧಿ ಪಡಿಸಿದ್ದು, ಈ ನಿಟ್ಟಿನಲ್ಲಿ ಯುವ ಜನತೆಯಲ್ಲಿ ನೀರಿನ ಮಿತ ಬಳಕೆ ಮತ್ತು ಉಳಿತಾಯ ಮಾಡುವ ಮನೋಭಾವನೆಯನ್ನು ಮೂಡಿಸುವ ಪ್ರಯತ್ನದಲ್ಲಿ ನೀರು ಉಳಿಸುವ ಯುವಕರನ್ನು ಸ್ವಯಂ ಸೇವಕರು ಎಂದು ಕರೆಯಲಾಗುವುದು. ಮುಂದಿನ ಪೀಳಿಗೆಗೆ ನೀರನ್ನು ಉಳಿಸುವುದು ಮತ್ತು ಅಂತರ್ಜಲದ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಅನುಷ್ಠಾನ ಗೊಳಿಸಿದೆ ಎಂದರು.
ಐ.ಕ್ಯೂ.ಎ.ಸಿ. ಸಂಯೋಜಕ ಡಾ. ಎಸ್.ಎಸ್.ದೇಸಾಯಿ ,ಇಕೋ ಕ್ಲಬಿನ ಸಂಯೋಜಕ ಪ್ರೋ.ರಶ್ಮೀ ಗಜಾಕೋಶ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಪ್ರೋ.ಬಸವರಾಜ ನೀಲವಾಣಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿಯ ಸೇವಾ ಪ್ರತಿನಿಧಿ ವಿಜಯಲಕ್ಷ್ಮೀ ಮತ್ತು ವಿದ್ಯಾರ್ಥಿಗಳು ಇದ್ದರು.

