ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಅಕ್ಟೋಬರ್ ೧ರಂದು ಬೆಳಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಆಯೋಜಿಸಲಾಗಿದೆ.
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ನಿಮಿತ್ಯ ಹಮ್ಮಿಕೊಳ್ಳಲಾದ ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಮಾಣ ಪತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೭೯೬೦೬೦ಗೆ ಸಂಪರ್ಕಿಸಬೇಕು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಪ್ರಕಟಣೆ ತಿಳಿಸಿದೆ.
