Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲೆಯ ಶೈಕ್ಷಣಿಕ ಫಲಿತಾಂಶ ಸುಧಾರಣೆಗೆ ರೂಪುರೇಷೆ ಸಿದ್ಧಪಡಿಸಿ
(ರಾಜ್ಯ ) ಜಿಲ್ಲೆ

ಜಿಲ್ಲೆಯ ಶೈಕ್ಷಣಿಕ ಫಲಿತಾಂಶ ಸುಧಾರಣೆಗೆ ರೂಪುರೇಷೆ ಸಿದ್ಧಪಡಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಸುಧಾರಿಸಿ ಜಿಲ್ಲೆಯ ಫಲಿತಾಂಶ ಸುಧಾರಣೆಗೆ ರೂಪುರೇಷೆ ಸಿದ್ಧಪಡಿಸಿಕೊಂಡು ಕಾರ್ಯನಿರ್ವಹಿಸಿ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಅವರು ಸೂಚಿಸಿದರು.
ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಗತಿ ಪರೀಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಸಮಾಜಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿನಿಲಯಗಳಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ವಸತಿನಿಲಯಗಳ ಸುತ್ತಮುತ್ತಲೂ ಹಾಗು ವಸತಿನಿಲಯ ಹೊಂದಿಕೋಮಡಿರುವ ರಸ್ತೆಗೆ ಬೀದಿದೀಪಗಳ ವ್ಯವಸ್ಥೆಯನ್ನು ಕಲ್ಪಿಸಿ, ವಿದ್ಯಾರ್ಥಿಗಳ ಸುರಕ್ಷತೆ ವಹಿಸಬೇಕು. ಗ್ರಂಥಾಲಯಯಗಳಲ್ಲಿ ನಿಯತಕಾಲಿಕೆ, ಸ್ಪರ್ಧಾತ್ಮಕ ಪುಸ್ತಕಗಳನ್ನು ಒದಗಿಸಿ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಪ್ರಥಮ ಪ್ರಾಶಸ್ತ್ಯ ನೀಡಬೇಕು. ಬಾಲಕಿಯರ ವಸತಿ ನಿಲಯಗಳಲ್ಲಿ ಸೂಕ್ತ ಸುರಕ್ಷತೆ ಒದಗಿಸಿದಲು ಸಿಸಿಟಿವಿ ಅಳವಡಿಸಿಬೇಕು. ಕಾಲಕಾಲಕ್ಕೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ವಸತಿ ನಿಲಯಗಳಿಗೆ ಭೇಟಿ ನೀಡಿ ನಿಲಯಗಳಲ್ಲಿ ಒದಗಿಸುತ್ತಿರುವ ಸೌಲಭ್ಯಗಳು ಮತ್ತು ಅವಶ್ಯಕ ಸಾಮಾಗ್ರಿಗಳ ಕುರಿತು ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಅನುಷ್ಟಾನಗೊಳಿಸಬೇಕು. ಈ ಕುರಿತು ಅಧಿಕಾರಿ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ಒದಗಿಸಿ ಇ-ಆಫೀಸ್ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಮಳೆೆಯಿಂದಾಗಿರುವ ಬೆಳೆಹಾನಿ-ಮನೆಹಾನಿಯ ವಿವರ ಪಡೆದ ಅವರು, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಬೆಳೆಹಾನಿಯ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಲುಷಿತ ನೀರು ಪೂರೈಕೆಯಾಗದಂತೆ ಕ್ರಮವಹಿಸಬೇಕು. ನಿಂತ ನೀರಿನಲ್ಲಿ ಸೊಳ್ಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗಗಳು ಹರಡದಂತೆ ಫಾಗಿಂಗ್, ಔಷಧ ಸಿಂಪಡಣೆಗೆ ಆರೋಗ್ಯ ಇಲಾಖೆ ಮುಂಜಾಗೃತೆ ವಹಿಸಬೇಕು ಎಂದು ಹೇಳಿದರು.
ಆಧಾರ್ ಸೀಡಿಂಗ್, ಲ್ಯಾಂಡ್ ಬೀಟ್ ವ್ಯವಸ್ಥೆ, ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷೀ, ಯುವನಿಧಿ ಮತ್ತು ಜಿಲ್ಲಾ ವಿಪತ್ತು ನಿರ್ವಹಣೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆ, ಬಗರ್ ಹುಕುಂ ಪ್ರಗತಿ, ಭೂಮಿ ಮ್ಯೂಟೇಶನ್, ಸಕಾಲ, ಭೂ ದಾಖಲೆ ಇಲಾಖೆ, ಅಬಕಾರಿ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ವಿಮಾನ ನಿಲ್ದಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ ಮಾತನಾಡಿ, ಈಗಾಗಲೇ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಮಿಷನ್ ವಿದ್ಯಾಪುರ ಯೋಜನೆಯನ್ನು ಹಮ್ಮಿಕೊಂಡು ಆನ್ ಲೈನ್ ಮೂಲಕ ತರಗತಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರತಿವಾರ ಘಟಕ ಪರೀಕ್ಷೆಯನ್ನು ಏರ್ಪಡಿಸಲಾಗುತ್ತಿದೆ. ರಸಪ್ರಶ್ನೆ, ಸೆಮಿನಾರ್, ಪೋನ್ ಇನ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಶೈಕ್ಷಣಿಕ ಫಲಿತಾಂಶ ಹೆಚ್ಚಳಕ್ಕೆ ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಅಗತ್ಯವಿರುವ ಶಾಲೆಗಳಿಗೆ ನಿಯೋಜಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರು ರಾಮನಗೌಡ ಹಟ್ಟಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಇಂಡಿ ಉಪವಿಭಾಗಾಧಿಕಾರಿ ಅಭೀದ್ ಗದ್ಯಾಳ, ಮಹಾನಗರಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕ ವಿನಯಕುಮಾರ ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಣಾಧಿಕಾರಿ ಸಂಪತಕುಮಾರ ಗುಣಾರಿ, ಜಿಲ್ಲಾ ಪಂಜಾಯಿತಿಯ ಮುಖ್ಯ ಯೋಜನಾ ನಿರ್ದೇಶಕ ನಿಂಗಪ್ಪ ಗೋಠೆ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಹುಲಕುಮಾರ ಬಾವಿದೊಡ್ಡಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ರೂಪಾ, ಪಿಆರ್‌ಇಡಿ ಕಾರ್ಯನಿವಾಹಕ ಅಭಿಯಂತರ ನಬಿಲಾಲ ಗಬಸಾವಳಗಿ, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಬಸವರಾಜ ಕುಂಬಾರ, ಹೆಸ್ಕಾಂನ ಅಧಿಕ್ಷಕ ಅಭಿಯಂತರಾರದ ಸಿದ್ದಪ್ಪ ಬಿಂಜಗೇರೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.