ಉದಯರಶ್ಮಿ ದಿನಪತ್ರಿಕೆ
ಚಡಚಣ: ತಾಲೂಕಿನ ಲೋಣಿ(ಬಿ.ಕೆ) ಗ್ರಾಮದ ಶ್ರೀ ರುದ್ರೇಶ್ವರ ಪ್ರೌಢ ಶಾಲೆಯಲ್ಲಿ ವಿಜ್ಞಾನ ವಿಷಯದ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಅಶೋಕ ಡುಣಗಿ ಹಾಗೂ ಕೇರೂರು ಗ್ರಾಮದ ಭೈರವನಾಥ ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯದ ಶಿಕ್ಷಕರಾಗಿ ವಿಠ್ಠಲ್ ಸಿದ್ದಗೊಂಡಪ್ಪ. ತಿಕ್ಕುಂಡಿ ಸೇವೆ ಸಲ್ಲಿಸುತ್ತಿರುವದನ್ನು ಗುರುತಿಸಿ, ಇವರನ್ನು ‘ಚಡಚಣ ತಾಲೂಕು ಮಟ್ಟದ ಶಿಕ್ಷಕರತ್ನ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.
ಚಡಚಣ ತಾಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಇವರ ವತಿಯಿಂದ ಚಡಚಣ ಪಟ್ಟಣದ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ಸೆಪ್ಟೆಂಬರ್. 29 ರ ಭಾನುವಾರದಂದು ಜರುಗುವ ‘ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ’ ಸಮಾರಂಭದಲ್ಲಿ ‘ಶಿಕ್ಷಕ ಧರೇಪ್ಪ ಪೂಜಾರಿ’ ಇವರನ್ನು ‘ಶಿಕ್ಷಕ ರತ್ನ ಪ್ರಶಸ್ತಿ’ಯನ್ನು ಪ್ರದಾನ ಮಾಡಿ, ಗೌರವಿಸಲಾಗುವುದು ಎಂದು ಚಡಚಣ ತಾಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಹಾಗೂ ಜಿಲ್ಲಾ ಕಾನಿಪ ಸಂಘದ ನಿರ್ದೇಶಕ ಶಂಕರ ಹಾವಿನಾಳ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

