ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಪಟ್ಟಣದ ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಅಡಿಯಲ್ಲಿರುವ ಬಸವೇಶ್ವರ ದೇವಾಲಯ ಅಂತರಾಷ್ಟ್ರೀಯ ಶಾಲೆಯ ವಿದ್ಯಾರ್ಥಿಗಳು ಮಂಗಳವಾರ ವಿಜಯಪುರದಲ್ಲಿ ಜರುಗಿದ ಜಿಲ್ಲಾ ಮಟ್ಟದ ದಸರಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿವಿಧ ಕ್ರೀಡೆಯಲ್ಲಿ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ಪುರುಷರ ಹ್ಯಾಂಡ್ಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗಕ್ಕೆ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಹಿಳೆಯರ ಹ್ಯಾಂಡ್ಬಾಲ್ನಲ್ಲಿ ದ್ವಿತೀಯ ಸ್ಥಾನ, ಪುರುಷರ ಟೇಬಲ್ ಟೆನ್ನಿಸ್ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕರಾದ ಮಹೇಶ ಸಂಗಮ, ವಿಜಯ ರಾಠೋಡ ತರಬೇತಿ ನೀಡಿದ್ದಾರೆ. ತರಬೇತಿ ನೀಡಿದ ಶಿಕ್ಷಕರಿಗೆ, ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶಾಲೆಯ ಸಲಹಾ ಸಮಿತಿ ಅಧ್ಯಕ್ಷ ಅನಿಲ ಅಗರವಾಲ, ಪ್ರಾಚಾರ್ಯೆ ಆರ್.ಎಂ.ರೋಣದ, ಶಿಕ್ಷಕ ಸಿಬ್ಬಂದಿ ಅಭಿನಂದಿಸಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.

