Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬುದ್ಧ-ಬಸವ-ಅಂಬೇಡ್ಕರ್ ರಿಂದ ಸಮಾನತೆಗಾಗಿ ಸಂಘರ್ಷ :ಡಾ.ಪಾಟೀಲ
(ರಾಜ್ಯ ) ಜಿಲ್ಲೆ

ಬುದ್ಧ-ಬಸವ-ಅಂಬೇಡ್ಕರ್ ರಿಂದ ಸಮಾನತೆಗಾಗಿ ಸಂಘರ್ಷ :ಡಾ.ಪಾಟೀಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಮಾನತಾ ಚಳುವಳಿಯ ಬಹುಮುಖ್ಯ ಭಾಗವಾಗಿ ಸಮಾಜದಲ್ಲಿ ವೈಚಾರಿಕ ಜಾಗೃತಿ ಮೂಡಿಸುವಲ್ಲಿ ಜನಪರ ಗಾಯಕರು, ಹೋರಾಟದ ಹಾಡುಗಾರರು ಬಹುದೊಡ್ಡ ಕೆಲಸ ಮಾಡುತಿದ್ದಾರೆ ಎಂದು ಕೃಷಿ ಮಹಾವಿದ್ಯಾಲಯದ ವಿದ್ಯಾಧಿಕಾರಿ ಡಾ.ಭೀಮಪ್ಪ ಎ. ಹೇಳಿದರು.
ಇಲ್ಲಿನ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಮೇ ಸಾಹಿತ್ಯ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಹೋರಾಟ ಹಾಡುಗಳ ತರಬೇತಿ ಶಿಬಿರವನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಮೂಢನಂಬಿಕೆಗೆ ಬಲಿಯಾಗಿ ಶೋಷಣೆಗೆ ಒಳಗಾಗುತ್ತಿರುವ ಬಹುಸಂಖ್ಯಾತ ಬಡವರು ಮತ್ತು ಕೆಳವರ್ಗದ ಜನರನ್ನು ಶೋಷಣೆಯಿಂದ ಮುಕ್ತಗೊಳಿಸುವ ಜವಾಬ್ದಾರಿ ಜನಪರ ಚಳವಳಿಗಾರರ ಮೇಲಿದೆ. ಆ ನಿಟ್ಟಿನಲ್ಲಿ ಜನಪರ ಗಾಯಕರು ಮತ್ತಷ್ಟು ಕೆಲಸ ಮಾಡಬೇಕು ಎಂದು ಹೇಳಿದರು.
ಬಸವಧರ್ಮ ಚಿಂತಕ ಡಾ. ಜೆ.ಎಸ್. ಪಾಟೀಲ್ ಮಾತನಾಡಿ, ಬುದ್ಧ-ಬಸವ-ಅಂಬೇಡ್ಕರ್ ಅವರು ಸಮಾನತೆಗಾಗಿ ಸಂಘರ್ಷ ಮಾಡಿದ್ದಾರೆ. ಸಂವಿಧಾನ ಜಾರಿಯಾಗಿ ೭೫ ವರ್ಷಗಳ ನಂತರವೂ ಲಿಂಗ ತಾರತಮ್ಯ, ಅಸ್ಪೃಶ್ಯತೆ ಆಚರಣೆ ಅಬಾಧಿತವಾಗಿ ನಡೆದಿದೆ. ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ. ಶೋಷಣೆಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಪರ ಹೋರಾಟಗಾರರು, ಹಾಡುಗಾರರು ಹೆಚ್ಚು ಹೆಚ್ಚು ಕೆಲಸ ಮಾಡಬೇಕಿದೆ ಎಂದರು.
ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥರಾದ ಬಾಲರಾಜ ಬಿರಾದಾರ ಅವರು ಮಾತನಾಡಿ, ಶತಮಾನಗಳಿಂದ ನಡೆದುಕೊಂಡು ಬಂದಿರುವ ಅಸ್ಪೃಶ್ಯತೆ ಆಚರಣೆ ಇವತ್ತು ಕಡಿಮೆಯಾಗಿದೆ ಎನಿಸಿದರೂ ಗ್ರಾಮೀಣ ಭಾಗದಲ್ಲಿ ಅದು ಜೀವಂತವಿದೆ. ಸಾಮಾಜಿಕ ಸಮಾನತ ತರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಚಿಂತಿಸುವ ಅಗತ್ಯವಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಪಾದರ್ ಟಿಯೋಲ್ ಮಾತನಾಡಿ, ಹವು ಜಾತಿಗಳಲ್ಲಿ ಹಂಚಿಹೋಗಿರುವ ಸಮಾಜದಲ್ಲಿ ಐಕ್ಯತೆ ಮೂಡಿಸುವ ದಿಸೆಯಲ್ಲಿ ಅನೇಕ ಮಹಾತ್ಮರು ಶ್ರಮಿಸಿಹೋಗಿದ್ದಾರೆ. ಸಂವಿಧಾನದ ಆಶಯದಂತೆ ಜಾತಿಮುಕ್ತ ಸಮಾಜದ ನಿರ್ಮಾಣಕ್ಕಾಗಿ ಅನೇಕ ಚಿಂತಕರು, ಕಲಾವಿದರು, ಹಾಡುಗಾರರು ಈಗಲೂ ಶ್ರಮಿಸುತ್ತಲೇ ಇದ್ದಾರೆ. ಸೌಹಾರ್ದ ಸಮಾಜಕ್ಕೆ ಮರುಸ್ಥಾಪನೆಗೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಹೇಳಿದರು.
ಶಿಬಿರ ನಿರ್ದೇಶಕರಾಗಿ ಆಗಮಿಸಿರುವ ಮೈಸೂರಿನ ಸಂಪನ್ಮೂಲ ವ್ಯಕ್ತಿ ಡಾ. ಎಂ. ಯೇಸುದಾಸ ಅವರು ಕ್ರಾಂತಿಗೀತೆ ಹಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ದಲಿತ ಮುಖಂಡರು ಹಾಗೂ ನ್ಯಾಯವಾದಿ ನಾಗರಾಜ ಲಂಬು, ಸಮಾಜ ಸೇವಕ ಫಯಾಜ ಕಲಾದಗಿ, ಕೃಷಿ ವಿಜ್ಙಾನಿ ಡಾ. ರವೀಂಧ್ರ ಬೆಳ್ಳಿ ವೇದಿಕೆಯಲ್ಲಿದ್ದರು. ಪ್ರಭುಗೌಡ ಪಾಟೀಲ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಚೆನ್ನು ಕಟ್ಟಿಮನಿ ವಂದಿಸಿದರು. ಅನಿಲ ಹೊಸಮನಿ, ಮೋಹನ ಕಟ್ಟಿಮನಿ ಮತ್ತಿತರರು ಇದ್ದರು.
ನಂತರ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಲಡಾಯಿ ಪ್ರಕಾಶನದ ಬಸವರಾಜ ಸೂಳಿಬಾವಿ, ಸಂಪನ್ಮೂಲ ವ್ಯಕ್ತಿಗಳಾದ ಶಂಬಯ್ಯ ಹಿರೇಮಠ, ಶಂಕ್ರಣ್ಣ ಸಂಕಣ್ಣವರ, ಡಾ. ಯೇಸುದಾಸ್, ಬಸವರಾಜ ಸೂಳಿಬಾವಿ ಶಿಬಿರದ ಉದ್ದೇಶಗಳನ್ನು ತಿಳಿಸಿದರು.
ಸೆ.೨೯ರಂದು ಸಂಜೆ ಶಿಬಿರ ಮುಕ್ತಾಯಗೊಳ್ಳಲಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026
    In ದಿನಪತ್ರಿಕೆ
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.