ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಅಭಿರಕ್ಷಕರ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಉಪ ಕಾನೂನು ಅಭಿರಕ್ಷಕರು ೦೨, ಸಹಾಯಕ ಕಾನೂನು ಅಭಿರಕ್ಷಕರು ೦೫, ಕಚೇರಿ ಸಹಾಯಕರ ೦೨ ಹಾಗೂ ಕಚೇರಿ ಪ್ಯೂನ್ ೦೨ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು, ಅಕ್ಟೋಬರ್ ೦೩ರೊಳಗಾಗಿ ಭರ್ತಿ ಮಾಡಿದ ಅರ್ಜಿಯನ್ನು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎಡಿಆರ್ ಕಟ್ಟಡ, ಜಿಲ್ಲಾ ನ್ಯಾಯಾಲಗಳ ಸಂಕೀರ್ಣ ವಿಜಯಪುರ ಇವರಿಗೆ ಸಲ್ಲಿಸುವಂತೆಯೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯನ್ನು ಸಂಪರ್ಕಿಸುವಂತೆಯೂ ಹಾಗೂ ವೆಬ್‌ಸೈಟ್ https://vijayapura.dcourts.gov.in/dlsa/ವೀಕ್ಷಿಸಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
