Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯಾವುದೇ ಪ್ರಾಣಿಯ ಕಡಿತವನ್ನು ನಿರ್ಲಕ್ಷಿಸದೇ ಲಸಿಕೆ ಹಾಕಿಸಿಕೊಳ್ಳಿ
(ರಾಜ್ಯ ) ಜಿಲ್ಲೆ

ಯಾವುದೇ ಪ್ರಾಣಿಯ ಕಡಿತವನ್ನು ನಿರ್ಲಕ್ಷಿಸದೇ ಲಸಿಕೆ ಹಾಕಿಸಿಕೊಳ್ಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ದೇಶದಲ್ಲಿ ಪ್ರತಿ ವರ್ಷ ೨೦ಸಾವಿರಕ್ಕೂ ಹೆಚ್ಚು ಜನ ಈ ರೇಬೀಸ್ ಮಹಾಮಾರಿಗೆ ಬಲಿಯಾಗುತ್ತಿದ್ದಾರೆ. ನಾಯಿ ಸೇರಿದಂತೆ ಯಾವುದೇ ಪ್ರಾಣಿಯ ಕಡಿತವನ್ನು ನಿರ್ಲಕ್ಷಿಸದೇ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಾಲೂಕಾ ಪಶುವೈದ್ಯಾಧಿಕಾರಿ ಡಾ.ಮಾರುತಿ ತಡಲಗಿ ಹೇಳಿದರು.
ಪಟ್ಟಣದ ಆರ್.ಡಿ.ಪಾಟೀಲ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ತಾಲೂಕಾ ಆರೋಗ್ಯ ಇಲಾಖೆ, ಪಶುಪಾಲನಾ, ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಆರ್.ಡಿ.ಪಾಟೀಲ ಪದವಿ ಪೂರ್ವ ಕಾಲೇಜು ಇವುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕಾರ್ಯಕ್ರಮ ಮತ್ತು ವಿಶ್ವ ರೇಬೀಸ್ ದಿನಾಚರಣೆಯನ್ನುದ್ದೇಶಿಸಿ ಅವರು ಮಾತನಾಡಿದ ಅವರು, ರೇಬೀಸ್ ಅನ್ನುವುದು ಸಸ್ತನಿಗಳಲ್ಲಿ ವೈರಾಣುವಿನಿಂದ ಹರಡುವ ಕಾಯಿಲೆ ಶ್ವಾನಗಳಿಂದ ಕಡಿತ ಮತ್ತು ಲಾಲಾರಸದ ಸಂಪರ್ಕದಿಂದ ಮನುಷ್ಯನಿಗೆ ಹರಡುತ್ತದೆ. ನೇರವಾಗಿ ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಮಿದುಳಿಗೆ ಘಾಸಿಯಾಗಿ ಸಾವು ಸಂಭವಿಸುತ್ತವೆ. ಆರಂಭದಲ್ಲಿಯೇ ಚಿಕಿತ್ಸೆ ಪಡೆದರೆ ಇದು ಗುಣಪಡಿಸಬಹುದಾದ ಕಾಯಿಲೆ ಎನ್ನುವುದು ತಜ್ಞರ ಅಭಿಮತವಾಗಿದೆ. ಶ್ವಾನಗಳಿಂದ ಮನುಷ್ಯನಿಗೆ ರೇಬೀಸ್ ಹರಡುವುದನ್ನು ೨೦೩೦ರ ಒಳಗೆ ತಡೆಯುವ ಗುರಿಯನ್ನು ಇರಿಸಿಕೊಳ್ಳಲಾಗಿದೆ. ಜಗತ್ತಿನಲ್ಲಿಯೇ ಭಾರತದಲ್ಲಿ ಈ ರೋಗದ ಪ್ರಮಾಣ ಹೆಚ್ಚಾಗಿದೆ ಎಂದರು.
ನಾಯಿಕಡಿತ, ರೇಬೀಸ್ ಲಕ್ಷಣಗಳು ಮತ್ತು ರೇಬೀಸ್‌ನ ನಂತರದ ರೊಗ ನಿರೋಧಕ ನಿರ್ವಹಣೆ ಕುರಿತು ಪ್ರೋಜೆಕ್ಟರ್ ಮೂಲಕ ಡಾ.ಮಾರುತಿ ತಡಲಗಿ ಅವರು ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ವಿವರಿಸಿದರು.
ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ಮಾತನಾಡಿ, ರೇಬೀಸ್‌ನಿಂದ ಮಾನವ ಸಾವುಗಳನ್ನು ನಿರ್ಮೂಲನೆ ಮಾಡುವದು ಸಾಧಿಸಬಹುದಾದ ಗುರಿಯಾಗಿದೆ. ರೇಬೀಸ್ ಯಾವುದೆ ನಿರ್ಧಿಷ್ಟ ಚಿಕಿತ್ಸೆ ಇಲ್ಲದರಿರುವುದರಿಂದ ಅದನ್ನು ತಡೆಯಲು ಎಲ್ಲ ಪ್ರಯತ್ನಗಳು ಅಗತ್ಯ. ಸಾಕು ನಾಯಿ ಮತ್ತು ಬೆಕ್ಕುಗಳಿಗೆ ನಿಯಮಿತವಾಗಿ ರೇಬೀಸ್ ನಿರೋಧಕ ಚುಚ್ಚುಮದ್ದನ್ನು ಕೊಡಿಸಬೇಕು ಅವುಗಳ ಆರೋಗ್ಯದ ಬಗ್ಗೆ ಪಶುವೈದ್ಯರಿಂದ ಸೂಕ್ತ ಸಲಹೆಗಳನ್ನು ಪಡೆದುಕೊಳ್ಳಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ಉಪಪ್ರಾಚಾರ್ಯ ಪಿ.ವ್ಹಿ.ಮಹಲಿನಮಠ, ತಾಲೂಕಾ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ವೈ.ಚೌಡಕಿ, ಆರೋಗ್ಯ ನಿರೀಕ್ಷಣಾಧಿಕಾರಿ ವಿರೇಂದ್ರ ಪವಾಡಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಎನ್.ಬಿ.ಪೂಜಾರಿ, ಎಸ್.ಎಸ್.ತಾಳಿಕೋಟಿ, ಡಾ.ಎಸ್.ಸಿ.ಜೋಗೂರ, ಶಿವಶರಣ ಬೂದಿಹಾಳ, ವ್ಹಿ.ಪಿ.ನಂದಿಕೋಲ, ಸಂಗಮೇಶ ಚಾವರ್, ಎನ್.ಎಂ.ಶೆಳ್ಳಗಿ, ರೋಹಿತ್ ಸುಲ್ಪಿ, ಚಂದ್ರು ಬಬಲೇಶ್ವರ್, ಎಸ್.ಜಿ.ಮಾರ್ಸನಳ್ಳಿ, ಎಸ್.ಎಚ್.ಜಾಧವ, ಬಿ.ಬಿ.ಜಮಾದಾರ, ಎಸ್.ಎಸ್.ಹೂಗಾರ, ರಾಹುಲ ನಾರಾಯಣಕರ್, ರಾಹುಲ ಕುನ್ನಾಳ, ಸುನೀಲ ಪಾಟೀಲ, ಪ್ರಸನ್ ಜೋಗೂರ, ಗವಿಸಿದ್ದಪ್ಪ ಆನೆಗುಂದಿ, ರೂಪಾ ಆಲಮೇಲ ಸೇರಿದಂತೆ ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಇನ್ನಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.