ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ವಿಶ್ವವಿದ್ಯಾನಿಲಯದ ಹಾಗೂ ಸಂಯೋಜಿತ ಮಹಿಳಾ ಮಹಾವಿದ್ಯಾಲಯಗಳ ಸ್ನಾತಕ ವಿದ್ಯಾರ್ಥಿನಿಯರಿಗಾಗಿ “ರಸಪ್ರಶ್ನೆ” ಸ್ಪರ್ಧೆಯನ್ನು ಇದೇ ಅ.೦೧ ರಂದು ಆಯೋಜಿಸಲಾಗಿದ್ದು, ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಗುವುದು ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

