Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅತಿಕ್ರಮ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ
(ರಾಜ್ಯ ) ಜಿಲ್ಲೆ

ಅತಿಕ್ರಮ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಪಟ್ಟಣದಲ್ಲಿ ರವಿವಾರ ಬೆಳ್ಳಂಬೆಳಿಗ್ಗೆ ಪುರಸಭೆಯ ವತಿಯಿಂದ ಪೊಲೀಸರ ಸರ್ಪಗಾವಲಿನಲ್ಲಿ ಎರಡು ಜೆಸಿಬಿಗಳು ಘರ್ಜಿಸಿವೆ.
ಇಲ್ಲಿನ ತಂಗಡಗಿ ರಸ್ತೆಯ ಜ್ಞಾನ ಭಾರತಿ ಶಾಲೆಯಿಂದ ಅಂಬೇಡ್ಕರ್ ವೃತ್ತ ಮತ್ತು ರಿಲಯನ್ಸ್ ಪೆಟ್ರೋಲ್ ಪಂಪ ವರೆಗೆ ಮುಖ್ಯ ರಸ್ತೆಯಲ್ಲಿ ಪುರಸಭೆ ಜಾಗೆಯನ್ನು ಅತಿಕ್ರಮಣ ಮಾಡಿದ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆಯಲ್ಲಿ ಪುರಸಭೆ ಸಫಲವಾಗಿದೆ.
ಹಲವು ದಿನಗಳಿಂದ ಪುರಸಭೆ ರಸ್ತೆಯನ್ನು ಅತಿಕ್ರಮಿಸಿ ಕೆಲವು ಡಬ್ಬಾ ಅಂಗಡಿಗಳು, ಗೂಡಂಗಡಿಗಳು ತಮ್ಮ ದೈನಂದಿನ ವ್ಯಾಪಾರ ವಹಿವಾಟುಗಳನ್ನು ನಡೆಸಿದ್ದರು. ಇದರ ಪರಿಣಾಮ ವಾಹನ ಸಂಚಾರಕ್ಕೆ, ದ್ವಿಚಕ್ರ ಮತ್ತು ನಾಲ್ಕು ಚಕ್ರಗಳ ವಾಹನ ನಿಲುಗಡೆಗೆ ಸಾಕಷ್ಟು ತೊಂದರೆಯಾಗಿತ್ತು. ಹಲವೆಡೆ ಪ್ರಮುಖ ರಸ್ತೆಗಳನ್ನು ಬಂದ್ ಮಾಡಿ ಡಬ್ಬಾ ಅಂಗಡಿಗಳನ್ನಿಟ್ಟು ವ್ಯವಸ್ಥಿತವಾಗಿ ನಡೆಸಲಾಗುತ್ತಿತ್ತು. ಅಲ್ಲದೇ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಭಯಾನಕ ಅಪಘಾತಗಳು ನಡೆದು ಶಾಲಾ ಮಕ್ಕಳ, ಯುವಕರ, ವೃದ್ಧರ ಸಾವುಗಳು ಅಗಿದ್ದವು. ಇದೆಲ್ಲ ಸಮಸ್ಯೆಗಳಿಗೆ ಪರಿಹಾರವಾಗಿ ಈ ಕಾರ್ಯಾಚರಣೆ ನಡೆಸಿರುವದಾಗಿ ಪುರಸಭೆ ಮೂಲಗಳಿಂದ ತಿಳಿದು ಬಂದಿದೆ.
ಕಳೆದ ಕೆಲವು ದಿನಗಳಿಂದ ಅಟೋ ಮೂಲಕ ಪಟ್ಟಣದಲ್ಲಿ ಅತಿಕ್ರಮಿತ ರಸ್ತೆಗಳ ತೆರವು ಕಾರ್ಯಾಚರಣೆ ಕೈಗೊಳ್ಳುವದಾಗಿ ದಿನಾಂಕ ಸಮೇತ ತಿಳಿಸಿದರೂ ಬಹುತೇಕರು ತಮ್ಮ ಅಂಗಡಿಗಳನ್ನು ತೆರವುಗೊಳಿಸಿರಲಿಲ್ಲ. ಕಾರ್ಯಾಚರಣೆ ವೇಳೆ ಯಾರ ಮುಲಾಜಿಗೂ ಒಳಗಾಗದೇ ತೆರವುಗೊಳಿಸಿದ್ದು ಪಟ್ಟಣದ ಸುಂದರತೆಯನ್ನು ಬಯಸುವವರ ಶ್ಲಾಘನೆಗೆ ಕಾರಣವಾಗಿದೆ.
ಈ ಕಾರ್ಯಾಚರಣೆ ಸೋಮುವಾರವೂ ಮುಂದುವರೆಯಲಿರುವದಾಗಿ ಪುರಸಭೆಯವರು ತಿಳಿಸಿದ್ದಾರೆ. ಪಟ್ಟಣದ ಬಸವೇಶ್ವರ ವೃತ್ತದಿಂದ ಮುಖ್ಯ ಬಜಾರ, ಇಂದಿರಾ ವೃತ್ತ, ಖಾದಿ ಕೇಂದ್ರ, ಆಲಮಟ್ಟಿ ರಸ್ತೆಯಲ್ಲಿ ಕಾರ್ಯಾಚರಣೆ ಮುಂದುವರೆಯಲಿದೆ.

ಬೆಳಕಿಗೆ ಬಂದ ಅತಿಕ್ರಮಣ ರಸ್ತೆ

ಪಟ್ಟಣದ ಬಸ್ ನಿಲ್ದಾಣದ ಎದುರು ಪಿಎಲ್‌ಡಿ ಬ್ಯಾಂಕ್ ನ ಮಳಿಗೆಗಳಿಗೆ ಹೊಂದಿಕೊಂಡು ಹಲವು ವರ್ಷಗಳಿಂದ ಪಾನ್ ಅಂಗಡಿಯೊಂದನ್ನಿಟ್ಟು ಪ್ರಮುಖ ರಸ್ತೆಯೊಂದನ್ನ ಅತಿಕ್ರಮಿಸಲಾಗಿತ್ತು. ಹಿಂದೆ ಹಲವಾರು ತೆರವು ಕಾರ್ಯಾಚರಣೆಗಳು ನಡೆದರೂ ಈ ರಸ್ತೆ ಬೆಳಕಿಗೆ ಬಂದಿರಲಿಲ್ಲ. ರವಿವಾರ ನಡೆದ ಕಾರ್ಯಾರಣೆಯಲ್ಲಿ ಇಲ್ಲಿ ರಸ್ತೆ ಇರುವದು ಬೆಳಕಿಗೆ ಬಂದಿದ್ದು ಇನ್ನೂ ಈ ರಸ್ತೆಯಲ್ಲಿ ಅತಿಕ್ರಮಣ ಕಟ್ಟಡಗಳು ಇದ್ದು ಅವುಗಳನ್ನು ತೆರವುಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಹಲವರು ಒತ್ತಾಯಿಸಿದ್ದಾರೆ.

ಬೆಂಗಳೂರು ಬೇಕರಿಯತ್ತ ಬೆರಳು

ತೆರವು ಕಾರ್ಯಾಚರಣೆಯ ಬಳಿಕ ಕೆಲವರು ಇಲ್ಲಿನ ಹುಡ್ಕೋ ಗೇಟ್ ಬಳಿ ಇರುವ ಬೆಂಗಳೂರು ಬೇಕರಿಯತ್ತ ಬೆರಳು ಮಾಡಿದರು. ಪುರಸಭೆ ಕಾಯ್ದೆಯ ವಿರುದ್ಧವಾಗಿ ಈ ಬಿಲ್ಡಿಂಗ್ ಕಟ್ಟಲಾಗಿದ್ದು ಅಲ್ಲದೇ ಬಿಲ್ಡಿಂಗ್ ನ ಮಧ್ಯ ಭಾಗದಲ್ಲಿರುವ ಸರ್ಕಾರಿ ರಸ್ತೆಯನ್ನೇ ನುಂಗಿಹಾಕಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಪುರಸಭೆ ಹಿಂದೇಟು ಹಾಕಿದೆ. ಬಡವರ ಅಂಗಡಿ ಕಿತ್ತೋದು ಬಂದ್ರೆ ಮಾತ್ರ ಇವರಿಗೆ ಕಾನೂನು ಶ್ರೀಮಂತರಿಗೆ ಯಾವ ಕಾನೂನುಗಳು ಇಲ್ಲವೇ? ಪುರಸಭೆ ಮುಖ್ಯಾಧಿಕಾರಿಗಳು ಕೂಡಲೇ ಇದರ ವಿರುದ್ಧ ಕ್ರಮ ಕೈಗೊಳ್ಳದೇ ಹೋದಲ್ಲಿ ಅವರ ವಿರುದ್ಧ ಕಾನೂನು ಹೋರಾಟ ನಡೆಸುತ್ತೇವೆ ಎಂದು ಕೆಲವರು ಎಚ್ಚರಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.