ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಕೇವಲ ಮುಖಂಡರಿಂದಷ್ಟೇ ಪಕ್ಷ ಬೆಳೆಯಲು ಸಾಧ್ಯವಿಲ್ಲ. ಯುವಕರು ಬೂತ್ ಮಟ್ಟದಲ್ಲಿ ಸಂಚರಿಸಿ ಪಕ್ಷದ ಸಾಧನೆಗಳನ್ನು ಸಾರ್ವಜನಿಕರಿಗೆ ತಿಳಿಸಿದಾಗ ಮಾತ್ರ ಪಕ್ಷ ಬೆಳೆಯಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಸದಸ್ಯತ್ವ ಅಭಿಯಾನ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.
ಮತಕ್ಷೇತ್ರದ ಗ್ರಾಮದಲ್ಲಿ ಬಿಜೆಪಿ ಸಂಘಟನಾ ಪರ್ವ ಮಹಾ ಸಂಪರ್ಕ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಜನಪರ ರೈತರ ಪರವಾಗಿ ಹತ್ತು ಹಲವಾರು ಹೊಸ ಹೊಸ ಯೋಜನೆಗಳನ್ನು ತರುವ ಮೂಲಕ ಬಲಿಷ್ಠ ರಾಷ್ಟ್ರಗಳು ಭಾರತದತ್ತ ಮುಖಮಾಡಿ ನೋಡುವ ಹಾಗೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಬಿಜೆಪಿ ಪಕ್ಷ ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ತಾವೆಲ್ಲರೂ ಬೂತ ಮಟ್ಟದಲ್ಲಿ ಸಂಚರಿಸಿ ಹೆಚ್ಚಿನ ಸಂಖ್ಯೆಯಲ್ಲಿ ನೂತನ ಸದಸ್ಯರನ್ನು ನೋಂದಾಯಿಸಬೇಕು ಎಂದು ಮನವಿ ಮಾಡಿದರು.
ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ತಾಲೂಕಾಧ್ಯಕ್ಷ ಸಂತೋಷ ಪಾಟೀಲ ಡಂಬಳ, ತಾಪಂ ಮಾಜಿ ಸದಸ್ಯ ಮಡಿವಾಳಪ್ಪ ಬೋನಾಳ, ಜಿ.ಕೆ.ನೆಲ್ಲಗಿ, ಮಲ್ಲನಗೌಡ ಬಿರಾದಾರ, ನಿಂಗಣ್ಣ ಅಗಸರ, ಸಿದ್ದನಗೌಡ ಗುತ್ತರಗಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

