ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಪಟ್ಟಣದ ಬಸವಭವನದಲ್ಲಿ ಶನಿವಾರ ತಾಜ್ ಸೋಶಿಯಲ್ ಗ್ರುಫ್ ಹಮ್ಮಿಕೊಂಡಿದ್ದ ಸೌಹಾರ್ದ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ್ದ ಕರ್ನಾಟಕ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಅವರನ್ನು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ರಾಜ್ಯದ ಸಾಂಸ್ಕ್ರತಿಕ ನಾಯಕ ಬಸವೇಶ್ವರರ ಭಾವಚಿತ್ರ ನೀಡುವ ಮೂಲಕ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ನಂದಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಸತ್ಯಜೀತ್ ಪಾಟೀಲ, ಕೆಪಿಸಿಸಿ ವಕ್ತಾರ ನಿಕಿತರಾಜ್ ಮೌರ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಐ.ಸಿ.ಪಟ್ಟಣಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಬಸವೇಶ್ವರ ಸೇವಾ ಸಮಿತಿ ಉಪಾಧ್ಯಕ್ಷ ಬಸವರಾಜ ಹಾರಿವಾಳ, ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಕಾಂಗ್ರೆಸ್ ಪಕ್ಷದ ಎಸ್ಸಿ ಘಟಕದ ಅಧ್ಯಕ್ಷ ಪರಶುರಾಮ ಜಮಖಂಡಿ, ಪುರಸಭೆ ಸದಸ್ಯರಾದ ಜಗದೇವಿ ಗುಂಡಳ್ಳಿ, ಪ್ರವೀಣ ಪೂಜಾರಿ, ನಜೀರ ಗಣಿ,ಟಿಎಪಿಎಂಸಿ ಅಧ್ಯಕ್ಷ ಚಂದ್ರಶೇಖರಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿ ರಾಠೋಡ, ಬಸವೇಶ್ವರ ದೇವಾಲಯ ಇಂಟರ್ನ್ಯಾಷನಲ್ ಶಾಲೆಯ ಸಲಹಾ ಸಮಿತಿ ಅಧ್ಯಕ್ಷ ಅನಿಲ ಅಗರವಾಲ, ಪಂಚಮಸಾಲಿ ಸಮಾಜ ತಾಲೂಕಾಧ್ಯಕ್ಷ ಬಸವರಾಜ ಗೊಳಸಂಗಿ, ಮುಖಂಡರಾದ ಬಸವರಾಜ ಕೋಟಿ, ಕಮಲಸಾಬ ಕೊರಬು, ಜಟ್ಟಿಂಗರಾಯ ಮಾಲಗಾರ, ಎಂ.ಜಿ.ಆದಿಗೊಂಡ, ಸಂಕನಗೌಡ ಪಾಟೀಲ, ಡಾ.ನದಾಫ್, ನಜೀರ ಗಣಿ, ಕಾಶೀನಾಥ ರಾಠೋಡ,ಮಹಾಂತೇಶ ಸಾಸಾಬಾಳ, ಸಿದ್ರಾಮ ಪಾತ್ರೋಟಿ, ಸಂಜೀವ ಕಲ್ಯಾಣಿ, ಶರಣಪ್ಪ ಬೆಲ್ಲದ, ರಮಜಾನ ಹೆಬ್ಬಾಳ, ಭದ್ರು ಮಣ್ಣೂರ ಇತರರು ಇದ್ದರು.

