Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೂದು ನೀರು ನಿರ್ವಹಣೆ ಅತ್ಯವಶ್ಯ ಕಾರ್ಯ: ಪಿಡಿಓ ರೇಣುಕಾ
(ರಾಜ್ಯ ) ಜಿಲ್ಲೆ

ಬೂದು ನೀರು ನಿರ್ವಹಣೆ ಅತ್ಯವಶ್ಯ ಕಾರ್ಯ: ಪಿಡಿಓ ರೇಣುಕಾ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಾಬಾನಗರ ಗ್ರಾಮದಲ್ಲಿ ಸ್ವಚ್ಛತೆಯೆಡೆಗೆ ದಿಟ್ಟ ಹೆಜ್ಜೆ ಅಭಿಯಾನ ಆಯೋಜನೆ

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ತಾಲೂಕು ವ್ಯಾಪ್ತಿಯ ಬಾಬಾನಗರ ಗ್ರಾಮದಲ್ಲಿ ತಾಲೂಕು ಪಂಚಾಯತಿ ತಿಕೋಟಾ ಹಾಗೂ ಗ್ರಾಮ ಪಂಚಾಯತಿ ಬಾಬಾನಗರ ಅವರ ವತಿಯಿಂದ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಐಇಸಿ ಕಾರ್ಯಕ್ರಮದಡಿ ಹಮ್ಮಿಕೊಂಡ ಸ್ವಚ್ಛತೆಯೆಡೆಗೆ ದಿಟ್ಟ ಹೆಜ್ಜೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರೇಣುಕಾ ಸೋಲಾಪುರ ರವರು, ಸೆ.೧೪ ರಿಂದ ನಮ್ಮ ಬಾಬಾನಗರ ಗ್ರಾಮ ಪಂಚಾಯತಿ ವತಿಯಿಂದ ಸ್ವಚ್ಛತೆಯೆಡೆಗೆ ದಿಟ್ಟ ಹೆಜ್ಜೆ ಅಭಿಯಾನ ವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದ ಭಾಗವಾಗಿ ಇಂದು ನಮ್ಮ ಗ್ರಾಮದ ವಿವಿಧ ಸರಕಾರಿ ಶಾಲೆ ಮಕ್ಕಳಿಂದ ಜಾಥಾ ಆಯೋಜನೆ ಮಾಡಲಾಗಿದೆ. ಅದರ ಜೊತೆಗೆ ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನದ ಪಕ್ಕ ಮನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಕಲ್ಯಾಣಿ ಹತ್ತಿರ ಶ್ರಮದಾನ ಮಾಡುವ ಮೂಲಕ ಈ ಅಭಿಯಾನದ ಮುಖ್ಯ ಉದ್ಧೇಶವಾದ ಬೂದು ನೀರು ನಿರ್ವಹಣೆ ಕುರಿತು ಜನ ಜಾಗೃತ್ತಿ ಮೂಡಿಸುವ ಕಾರ್ಯ ಮಾಡುತ್ತಿದ್ದೇವೆ ಎಂದರು.
ಬೂದು ನೀರು ನಿರ್ವಹಣೆಯು ಪ್ರಸ್ತುತ ದಿನಮಾನದಲ್ಲಿ ಅತೀ ಅವಶ್ಯಕವಾದ ಪ್ರಥಮಾಧ್ಯತೆಯ ಕಾರ್ಯವಾಗಿದೆ. ಬೂದು ನೀರು ನಿರ್ವಹಣೆಯಿಂದ ನಮಗೆ ಸಾಕಷ್ಟು ಅನುಕೂಲಗಳಿವೆ ಎಂದರು.
ತಾಲೂಕು ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ ಮಾತನಾಡಿ, ಈ ಅಭಿಯಾನದ ಪ್ರಯುಕ್ತ ಸ್ವ-ಸಹಾಯ ಸಂಘದವರು, ನಾಗರಿಕ ಸೇವಾ ಸಂಘ, ಸಮುದಾಯ ಸಂಘಟನೆಗಳು, ಶಾಲಾ ಕಾಲೇಜಿನ ವಿದ್ಯಾರ್ಥಿಗಳ, ಗ್ರಾಮಸ್ಥರ ಸಹಯೋಗದಲ್ಲಿ ಮನರೇಗಾ ಯೋಜನೆಯಡಿ ಅನುಷ್ಠಾನ ಮಾಡಲಾದ ಜಲಸಂರಕ್ಷಣೆ ಕಾಮಗಾರಿಗಳಲ್ಲಿ ಶ್ರಮದಾನ ಮಾಡಿ ಸ್ವಚ್ಛಗೊಳಿಸಲಾಗಿದೆ. ಅದರಂತೆ ಇಂದು ಬಾಬಾನಗರ ಗ್ರಾಮದ ಕಲ್ಯಾಣಿ ಸ್ಥಳದಲ್ಲಿ ಶ್ರಮದಾನ ಮಾಡುವ ಮೂಲಕ ಜಲ ಸಂರಕ್ಷಣೆಯ ಕಾಮಗಾರಿಯ ಸ್ವಚ್ಛತೆಯ ಮಹತ್ವದ ಕುರಿತು ಸಮುದಾಯಕ್ಕೆ ಜಾಗೃತಿ ಮೂಡಿಸುವ ಕಾರ್ಯ ಮಾಡಿದ್ದೇವೆ ಎಂದರು.
ಗ್ರಾಮೀಣ ಭಾಗದಲ್ಲಿ ಉತ್ತಮ ಆರೋಗ್ಯ, ಉತ್ತಮ ಪರಿಸರ ಹಾಗೂ ಉತ್ತಮ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ಸರ್ಕಾರ ಈಗಾಗಲೇ ಗ್ರಾಮೀಣ ಪ್ರದೇಶಗಳಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಜನರು ಬಚ್ಚಲು ನೀರು, ಬಟ್ಟೆಗಳನ್ನು ತೊಳೆದ ನೀರು ಹಾಗೂ ಪಾತ್ರೆಗಳನ್ನು ತೊಳೆದ ನೀರನ್ನು ರಸ್ತೆಗಳಿಗೆ ಬಿಡುವದರಿಂದ ಅವು ಅಲ್ಲಿಯೇ ನಿಂತು ಸಾಂಕ್ರಾಮಿಕ ರೋಗಗಳ ಹೆಚ್ಚಳಕ್ಕೆ ಆಹಾರವಾಗುತ್ತಿತ್ತು. ಪ್ರಸ್ತುತ ಮನರೇಗಾ ಯೋಜನೆಯಡಿ ಬಚ್ಚಲು ಗುಂಡಿ ನಿರ್ಮಿಸಲು ಅವಕಾಶ ನೀಡಲಾಗಿದ್ದು, ಗ್ರಾಮಸ್ಥರು ಅದರ ಉಪಯೋಗ ಪಡೆದುಕೊಳ್ಳುವದರ ಮೂಲಕ ಗ್ರಾಮ ನೈರ್ಮಲ್ಯಕ್ಕೆ ಕಾರಣರಾಗಬೇಕು ಎಂದರು.
ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರೇಣುಕಾ ಸೋಲಾಪುರ, ತಾಂತ್ರಿಕ ಸಂಯೋಜಕ ನಾಗರಾಜ ಕಲಕೇರಿ, ತಾಲೂಕು ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ, ಗ್ರಾಮ ಪಂಚಾಯತಿ ಸದಸ್ಯರಾದ ಸಿದ್ಧಗೋಂಡ ರುದ್ರಗೌಡರ, ಪ್ರಕಾಶ ಆಯತವಾಡ, ರಾಜು ಪೂಜಾರಿ, ಕಾರ್ಯದರ್ಶಿ ಸಿ.ಬಿ.ಕೊಲಕಾರ, ಟಿಎಇ ಶ್ರೀಧರ ಸಾವಳಗಿ, ಗ್ರಾಮ ಕಾಯಕ ಮಿತ್ರ ಈರಮ್ಮ ಭೊಮ್ಮನಹಳ್ಳಿ, ಗ್ರಾಮ ಪಂಚಾಯತಿ ಸಿಬ್ಬಂದಿಗಳಾದ ಲಕ್ಕಪ್ಪ ತಳವಾರ, ಪ್ರಕಾಶ ವಾಲಿಕಾರ, ರಾಕೇಶ ಸಾವಳಗಿ, ಸಂಜು ಕುಸನಾಳ ಸೇರಿದಂತೆ ಶಾಲಾ ಶಿಕ್ಷಕರು, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಸ್ವ-ಸಹಾಯ ಸಂಘದ ಸದಸ್ಯರು, ಚುನಾಯಿತ ಜನಪ್ರತಿನಿಧಿಗಳು, ಶಾಲಾ ಮಕ್ಕಳು ಸೇರಿ ಇತರರು ಹಾಜರಿದ್ದರು.

ಅಭಿಯಾನದ ಭಾಗವಾಗಿ ಗ್ರಾಮದ ಸರಕಾರಿ ಕನ್ನಡ ಗಂಡು ಮಕ್ಕಳ ಶಾಲೆ, ಸರಕಾರಿ ಕನ್ನಡ ಹೆಣ್ಣು ಮಕ್ಕಳ ಶಾಲೆ, ಸರಕಾರಿ ಉರ್ದು ಪ್ರಾಥಮಿಕ ಶಾಲೆ ಮಕ್ಕಳಿಂದ ಗ್ರಾಮ ಪ್ರಮುಖ ಬೀದಿಯಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು. ಜಾಥಾಯುದ್ದಕ್ಕೂ ಮಕ್ಕಳು ಆರೋಗ್ಯ & ಸ್ವಚ್ಛತೆಯ ಕುರಿತಾದ ಘೋಷಣೆಗಳನ್ನು ಕೂಗುತ್ತಾ ಜಾಗೃತಿ ಮೂಡಿಸಿದರು.
ನಂತರ ಗ್ರಾಮದ ಯಲ್ಲಮ್ಮದೇವಿ ದೇವಸ್ಥಾನದ ಪಕ್ಕದಲ್ಲಿ ಮನರೇಗಾ ಯೋಜನೆಯಡಿ ನಿರ್ಮಿಸಿದ ಕಲ್ಯಾಣಿ ಪಕ್ಕದಲ್ಲಿ ಶ್ರಮದಾನ ಕೈಗೊಳ್ಳಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.