Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳ ಬಗ್ಗೆ ಬಬಲೇಶ್ವರ ಅವರ ಕಾಳಜಿ ಅನನ್ಯ :ಎಡಿಸಿ ಗೀತಾ
(ರಾಜ್ಯ ) ಜಿಲ್ಲೆ

ಮಕ್ಕಳ ಬಗ್ಗೆ ಬಬಲೇಶ್ವರ ಅವರ ಕಾಳಜಿ ಅನನ್ಯ :ಎಡಿಸಿ ಗೀತಾ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಾಲಮಂದಿರ ಮಕ್ಕಳಿಗಾಗಿ ಬಾಲ ವಿಕಾಸ ಅಕಾಡೆಮಿ ಆಯೋಜಿಸಿದ ೨ನೇ ಹಂತದ ರಾಜ್ಯಮಟ್ಟದ ಕಥಾ ಕಮ್ಮಟಕ್ಕೆ ಚಾಲನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಕ್ಕಳ ಸೇವೆಯಲ್ಲಿ ಭಗವಂತನನ್ನು ಕಾಣುವ, ಮಕ್ಕಳ ಬಗೆಗೆ ಅಪಾರ ಕಾಳಜಿ ಕಕ್ಕುಲತೆಯನ್ನು ಹೊಂದಿರುವ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರ ಕಾರ್ಯ ಅನನ್ಯವಾದದ್ದು. ನಾಡಿನ ಬಾಲಮಂದಿರದ ಮಕ್ಕಳನ್ನು ನಿಸರ್ಗದ ಮಡಿಲಿನಲ್ಲಿ ಕರೆತಂದು, ಮಕ್ಕಳ ಸೃಜನಶೀಲ ವ್ಯಕ್ತಿತ್ವ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಸಂಗಮೇಶ ಅವರಿಗೆ ದೇವರು ಇನ್ನಷ್ಟು ಶಕ್ತಿಯನ್ನು, ಅಧಿಕಾರವನ್ನು ನೀಡಲಿ ಎಂದು ಧಾರವಾಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಶ್ರೀಮತಿ ಗೀತಾ ಸಿ.ಡಿ ಹೇಳಿದರು.
ಹಳ್ಳಿಗೇರಿ ಹತ್ತಿರವಿರುವ ನೇಚರ್ ಫಸ್ಟ್ ಇಕೋ ವಿಲೇಜ್ ರೆಸಾರ್ಟ್ ನಲ್ಲಿ ಹತ್ತು ಜಿಲ್ಲೆಗಳಿಂದ ಆಗಮಿಸಿರುವ ಬಾಲಮಂದಿರದ ಮಕ್ಕಳಿಗಾಗಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಆಯೋಜಿಸಿರುವ ಎರಡನೇ ಹಂತದ ರಾಜ್ಯಮಟ್ಟದ ಕಥಾ ಕಮ್ಮಟ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಮಾತನಾಡಿ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ರಾಜ್ಯದ ಸಮಸ್ತ ಮಕ್ಕಳ ಶ್ರೇಯೋಭಿವೃದ್ಧಿಗೆ ಬದ್ಧವಾಗಿದ್ದು ಅದರಲ್ಲೂ ವಿಶೇಷವಾಗಿ ಬಾಲಮಂದಿರದ ಮಕ್ಕಳಿಗಾಗಿ ಅವರ ಪ್ರಗತಿಗಾಗಿ ಸದಾ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿದ್ದ ಧಾರವಾಡದ ತಹಸಿಲ್ದಾರ್ ಬಿ.ಹೆಚ್ ಹೂಗಾರ ಮಾತನಾಡಿ ” ಬಾಲ ಮಂದಿರದ ವಿಶೇಷ ಮಕ್ಕಳಿಗೆ ಇಂತಹ ಸುಸಜ್ಜಿತವಾದ ಪರಿಸರಸ್ನೇಹಿ ರೆಸಾರ್ಟ್ ನಲ್ಲಿ ಉಳಿಸಿ ರಾಜ್ಯದ ಮೂಲೆ ಮೂಲೆಯಿಂದ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ಅವರ ವ್ಯಕ್ತಿತ್ವ ರೂಪಿಸುವ ನಿಟ್ಟಿನಲ್ಲಿ ಸಂಗಮೇಶ ಬಬಲೇಶ್ವರ ಅವರು ದಿಟ್ಟ ಹೆಜ್ಜೆಯನ್ನು ಇಟ್ಟಿದ್ದಾರೆ. ಇದಕ್ಕಿಂತ ಪುಣ್ಯದ ಕೆಲಸ ಮತ್ತೊಂದಿಲ್ಲ ಎಂದು ಹೇಳಿದರು.
ಅಕಾಡೆಮಿಯ ಯೋಜನಾಧಿಕಾರಿ ಭಾರತಿ ಶೆಟ್ಟರ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಅತಿಥಿಗಳಾಗಿ ಮಲ್ಲನಗೌಡ ಪಾಟೀಲ, ಬಸವರಾಜ್ ಮರಿತಮ್ಮನವರ, ಉಪನಿರ್ದೇಶಕ ರವೀಂದ್ರ ರತ್ನಾಕರ, ದೀಪಾ ಜಾವೂರ, ಪುಷ್ಪ ಹಂಜಗಿ, ಸ್ವ ವರ್ಣಲತಾ ಮಠದ, ಶ್ರೀಮತಿ ಮೇಟಿ ಹಾಗೂ 9 ಜಿಲ್ಲೆಗಳಿಂದ ಆಗಮಿಸಿರುವ ಮುದ್ದು ಮಕ್ಕಳು, ನಿಲಯ ಪಾಲಕರು ಮುದ್ದು ಮಕ್ಕಳು ಉಪಸ್ಥಿತರಿದ್ದರು.

“ನಮಗಿರುವ ಎಲ್ಲ ನ್ಯೂನ್ಯತೆಗಳನ್ನು ಬದಿಗಿಟ್ಟು, ಆತ್ಮವಿಶ್ವಾಸದಿಂದ ಮುನ್ನುಗ್ಗಿ ಮಕ್ಕಳೆಲ್ಲರೂ ಶ್ರೇಷ್ಠ ಸಾಧಕರಾಗಿ ಹೊರಹೊಮ್ಮಿದಾಗ, ಜೊತೆಗೆ ಅವರ ಸಾಧನೆಯ ಕಥೆಗಳನ್ನು ಜಗತ್ತು ಓದುವಂತಾದಾಗ ನಮ್ಮೆಲ್ಲರ ಪ್ರಯತ್ನ ಸಾರ್ಥಕವಾಗುತ್ತದೆ.”
– ಸಂಗಮೇಶ ಬಬಲೇಶ್ವರ
ಅಧ್ಯಕ್ಷರು, ಕರ್ನಾಟಕ ಬಾಲವಿಕಾಸ ಅಕಾಡೆಮಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.