ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಕ್ಟೋಬರ್ ೨ರಂದು ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಅಂದು ರಾಜ್ಯದಾದ್ಯಂತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿತ ದಿನವೆಂದು ಸರ್ಕಾರ ಘೋಷಿಸಿದೆ. ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ವಿಜಯಪುರ ಮಹಾನಗರಪಾಲಿಕೆಯ ಪರಿಸರ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
