Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಿಎಸೈ ಹುದ್ದೆ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಿ :ಡಿಸಿ ಟಿ.ಭೂಬಾಲನ್
(ರಾಜ್ಯ ) ಜಿಲ್ಲೆ

ಪಿಎಸೈ ಹುದ್ದೆ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಿ :ಡಿಸಿ ಟಿ.ಭೂಬಾಲನ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪಿ.ಎಸ್.ಐ ಸ್ಪರ್ಧಾತ್ಮಕ ಪರೀಕ್ಷೆಯು ಜಿಲ್ಲೆಯ ಒಟ್ಟು ೧೧ ಕೇಂದ್ರಗಳಲ್ಲಿ ಅಕ್ಟೋಬರ್ ೦೩ರಂದು ಜರುಗಲಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಪಿ.ಎಸ್.ಐ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಟ್ಟು ೪,೯೨೦ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಿಗ್ಗೆ ೧೦-೩೦ರಿಂದ ೧೨-೦೦ರವರೆಗೆ ಪತ್ರಿಕೆ-೧ ಹಾಗೂ ಮಧ್ಯಾಹ್ನ ೧೨-೩೦ರಿಂದ ಮಧ್ಯಾಹ್ನ ೨-೦೦ ರವರೆಗೆ ಪತ್ರಿಕೆ-೨ರ ಪರೀಕ್ಷೆಗಳು ನಡೆಯಲಿವೆ.
ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಿರುವ ಬಗ್ಗೆ ತಪಾಸಣೆ ನಡೆಸಬೇಕು. ಪರೀಕ್ಷಾ ಹಿಂದಿನ ದಿನ ಸಿಸಿಟಿವಿ ಕ್ಯಾಮರಾ ಬಾಡಿ ಕ್ಯಾಮರಾ, ಪ್ರಿಸ್ಕಿಂಗ್, ಮುಖ ಚಹರೆ ಮತ್ತು ಜಾಮರ್‌ಗಳನ್ನು ಉಪ ಪರೀಕ್ಷಾ ಕೇಂದ್ರದ ಪರೀಕ್ಷಾ ಕೊಠಡಿಗಳಲ್ಲಿ ಅಳವಡಿಸುವುದು, ಪರೀಕ್ಷಾ ದಿನದಂದು ಅವುಗಳು ಕಾರ್ಯನಿರ್ವಹಿಸುತ್ತಿರುವ ಕುರಿತು ಪರಿಶೀಲಿಸಿಕೊಳ್ಳಬೇಕು. ಎಲ್ಲಾ ಸಿಸಿಟಿವಿ ಕ್ಯಾಮಾರಾಗಳ ವಿಕ್ಷಣೆಗೆ ಅನುಕೂಲವಾಗುವಂತೆ ದೃಶ್ಯಾವಳಿ ವೀಕ್ಷಿಸಲು ಮಾನಿಟರ್ ಅಳವಡಿಸಿ ವೆಬ್ ಕಾಸ್ಟಿಂಗ್ ಮಾಡಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಾಕಷ್ಟು ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮ ವಹಿಸಬೇಕು. ಪರೀಕ್ಷೆಗಳಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು ಲೋಪ ಕಂಡು ಬಂದಲ್ಲಿ ತಪ್ಪಿಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಯಾವುದೇ ಕಾರಣಕ್ಕೂ ತಮಗೆ ವಹಿಸಿದ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಖಾರಿ ಋಷಿಕೇಶ ಸೋನಾವಣೆ, ಅಪರ ಜಿಲ್ಲಾಧಿಖಾರಿ ಸೋಮಲಿಂಗ ಗೆಣ್ಣುರ ಖಜಾನೆ ಇಲಾಖೆಯ ಉಪನಿರ್ದೇಶಕ ಹಣಮಂತ ಕಾಲತಿಪ್ಪಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ, ಮಾರ್ಗಾಧಿಕಾರಿಗಳು, ಅಧೀಕ್ಷಕರು, ಸ್ಥಾನಿಕ ನಿರೀಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ವೀಕ್ಷಕರು ಉಪಸ್ಥಿತರಿದ್ದರು.

ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿ

ಜಿಲ್ಲೆಯ ಒಟ್ಟು ೧೧ ಪರೀಕ್ಷಾ ಕೇಂದ್ರಗಳಲ್ಲಿ ಅಕ್ಟೋಬರ್ ೦೩ ರಂದು ನಡೆಯುವ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ (ಪಿಎಸ್‌ಐ) ಪರೀಕ್ಷೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರದ ಸುತ್ತಲಿನ ೨೦೦ ಮೀ.ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಸಿಬ್ಬಂದಿ ಮತ್ತು ಇತರರು ಯಾವುದೇ ತರಹದ ಎಲೆಕ್ಟ್ರಾನಿಕ್ ವಸ್ತುಗಳನ್ನು, ಸ್ಮಾರ್ಟ ಮೊಬೈಲ್ ಫೋನ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಿದೆ. ಪರೀಕ್ಷೆ ನಡೆಯುವ ದಿನಗಳಂದು ಬೆಳಿಗ್ಗೆ ೮:೩೦ ರಿಂದ ಪರೀಕ್ಷೆ ಮುಗಿಯುವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಿದ್ದು, ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳನ್ನು ಪರೀಕ್ಷೆ ನಡೆಯುವ ಅವಧಿಯಲ್ಲಿ ತೆರೆಯದಂತೆ ಆದೇಶಿಸಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.