ವಿಜಯಪುರ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳು
ವಿಜಯಪುರ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ವಿಜಯಪುರ ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರಗಳಿಗೆ ಸಲ್ಲಿಸಿದ 122 ಅಭ್ಯರ್ಥಿಗಳ ಪೈಕಿ 7 ಅಭ್ಯರ್ಥಿಗಳ ನಾಮಪತ್ರಗಳು ವಿವಿಧ ಕಾರಣಗಳಿಂದ ತಿರಸ್ಕೃತಗೊಂಡು 103 ಪುರುಷ ಹಾಗೂ 12 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 115 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ.
ಮುದ್ದೇಬಿಹಾಳ ಮತಕ್ಷೇತ್ರದಲ್ಲಿ 02, ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ 01, ಬಿಜಾಪುರ ನಗರ ಮತಕ್ಷೇತ್ರದಲ್ಲಿ 02, ನಾಗಠಾಣ ಮೀಸಲು ಮತಕ್ಷೇತ್ರದಲ್ಲಿ 02 ಸೇರಿದಂತೆ ಒಟ್ಟು 07 ನಾಮಪತ್ರಗಳು ತಿರಸ್ಕೃತಗೊಂಡಿದ್ದು, ದೇವರಹಿಪ್ಪರಗಿ, ಬಬಲೇಶ್ವರ, ಇಂಡಿ ಹಾಗೂ ಸಿಂದಗಿ ಮತಕ್ಷೇತ್ರದಲ್ಲಿ ಯಾವುದೇ ನಾಮಪತ್ರಗಳು ತಿರಸ್ಕೃತಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.