Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಾಂಧೀಜಿ & ಶಾಸ್ತ್ರೀಜಿ ತಮ್ಮ ಸಂದೇಶದ ಮೂಲಕ ನೀಡಿದ ಕೊಡುಗೆ ಅಪಾರ
(ರಾಜ್ಯ ) ಜಿಲ್ಲೆ

ಗಾಂಧೀಜಿ & ಶಾಸ್ತ್ರೀಜಿ ತಮ್ಮ ಸಂದೇಶದ ಮೂಲಕ ನೀಡಿದ ಕೊಡುಗೆ ಅಪಾರ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಹಾತ್ಮ ಗಾಂಧೀಜಿ-ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ | ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ತಮ್ಮ ಸಂದೇಶದ ಮೂಲಕ ನೀಡಿದ ಕೊಡುಗೆ ಅಮೂಲ್ಯವಾದದ್ದು, ಈ ಮಹಾನ್ ವ್ಯಕ್ತಿಗಳ ತ್ಯಾಗ, ನಿಷ್ಠೆ, ಪ್ರಾಮಾಣಿಕತೆ, ಸತ್ಯ, ಅಹಿಂಸಾ, ಸರಳತೆಯ ತತ್ವಾದರ್ಶಗಳನ್ನು ಹಾಗೂ ಅವರ ಜೀವನದ ಸಂದೇಶ ಮೌಲ್ಯಗಳನ್ನು ಯುವ ಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಆಯೋಜಿಸಲಾದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಮಹನೀಯರ ಕುರಿತು ಇಂದಿನ ಜನರು ಅಧ್ಯಯನ ಮಾಡುವ ಮೂಲಕ ಅವರ ಚಿಂತನೆಗಳನ್ನು ಹಾಗೂ ಆದರ್ಶ ವಿಚಾರಗಳನ್ನು ಅರಿತುಕೊಳ್ಳಬೇಕು. ದೇಶಕ್ಕೆ ಸ್ವಾತಂತ್ರ್ಯ ದೊರಕಿಸುವಲ್ಲಿ ಮಹತ್ವರ ಪಾತ್ರ ವಹಿಸಿ ಸತ್ಯ, ಅಹಿಂಸೆಯ ಹೋರಾಟದ ಹಾದಿ ಅನುಸರಿಸಿ ವಿಶ್ವಕ್ಕೆ ದೊಡ್ಡ ಸಂದೇಶ ಸಾರಿದವರು ಮಹಾತ್ಮ ಗಾಂಧೀಜಿಯವರು. ವಿಶ್ವಸಂಸ್ಥೆಯು ಮಹಾತ್ಮ ಗಾಂಧೀಜಿಯವರ ಜನ್ಮದಿನಾಚರಣೆಯನ್ನು ಅಹಿಂಸಾ ದಿನಾಚರಣೆಯನ್ನಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಆಚರಿಸುತ್ತಿರುವುದು ವಿಶ್ವ ಅವರನ್ನು ಗೌರವಿಸುವ ಪರಿಯಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಶ್ರೀಮತಿ ಮೀನಾಕ್ಷಿ ಪಾಟೀಲ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಮೇಯರ್ ಮಹೇಜಬಿನ್ ಹೊರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಎಡಿಸಿ ಸೋಮಲಿಂಗ ಗೆಣ್ಣೂರ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ ಅಜೂರ, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎನ್.ಎಚ್.ನಾಗೂರ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಯುವ ಜನಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಮರೇಶ ದೊಡಮನಿ, ಪೀಟರ್ ಅಲೆಕ್ಸಾಂಡರ್, ಅಶೋಕ್ ಘೋಣಸಗಿ, ಬಾಬುಗೌಡ ಪಾಟೀಲ, ನಿಲೇಶ್ ಬೇನಾಳ, ಭೀಮರಾಯ ಜಿಗಜಿಣಗಿ, ಗಿರೀಶ್ ಕುಲಕರ್ಣಿ, ನಿವೃತ್ತ ಶಿಕ್ಷಕರಾದ ಎ.ಎಚ್.ಮಮದಾಪೂರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ, ವಿವಿಧ ಶಾಲಾ ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

” ಮಹನೀಯರ ಜೀವನದ ತತ್ವಗಳನ್ನು ಸ್ಮರಿಸಲು ಹಾಗೂ ಅವರಿಗೆ ಗೌರವ ಅರ್ಪಿಸಲು ಜಯಂತಿ ಆಚರಣೆ ಮಾಡುತ್ತೇವೆ. ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲಿದ್ದ ಮಹಾತ್ಮ ಗಾಂಧಿ ಅವರು ಸಾಮಾಜಿಕ, ರಾಜಕೀಯ ಬದಲಾವಣೆಗೆ ದೇಶಾದ್ಯಂತ ಸಂಚರಿಸಿ ಜನರ ಸಮಸ್ಯೆ ಅರಿತು ಅವಿರತವಾಗಿ ಶ್ರಮಿಸಿದರು. ಗ್ರಾಮಗಳ ಅಭಿವೃಧಿ ದೇಶದ ಅಭಿವೃದ್ಧಿ ಎಂಬ ಗ್ರಾಮ ಸ್ವರಾಜ್ಯ ಪರಿಕಲ್ಪನೆ ತಂದರು.”
– ರಿಷಿ ಆನಂದ
ಜಿಪಂ ಮುಖ್ಯಕಾರ್ಯನಿರ್ವಾಹಣಾಧಿಕಾರಿ

ಗಾಂಧಿ ಭವನದಲ್ಲಿ ಜಯಂತಿ ಆಚರಣೆ | ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳು

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ನಗರದ ಜಿಲ್ಲಾ ಪಂಚಾಯತಿಯ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಆಯೋಜಿಸಲಾದ ಮಹಾತ್ಮ ಗಾಂಧಿ ಅವರ ೧೫೫ನೇ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗಿತು.
ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಮೇಯರ್ ಮಹೇಜಬಿನ್ ಹೊರ್ತಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಅವರು, ಚರಕ ನೇಯುವ ಮೂಲಕ ಚಾಲನೆ ನೀಡಿ, ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆ ಮಾಡಲಾಯಿತು. ವೀರೇಶ ವಾಲಿ ತಂಡದವರಿಂದ ಗಾಂಧೀಜಿ ಅವರ ಪ್ರಿಯ ಭಜನೆ ಪ್ರಸ್ತುತಪಡಿಸಲಾಯಿತು. ಜಯಂತಿ ಕಾರ್ಯಕ್ರಮದಲ್ಲಿ ಛದ್ಮ ವೇಷಧಾರಿಯಾಗಿ ಬಂದಿದ್ದ ಮಕ್ಕಳು ಕಾರ್ಯಕ್ರಮದ ಆಕರ್ಷಣೀಯ ಕೇಂದ್ರ ಬಿಂದುವಾಗಿದ್ದರು.
ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ-ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ “ಬಾಪೂಜಿ ಪ್ರಬಂಧ ಸ್ಪರ್ಧೆ”ಯಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಲಾಯಿತು.
ಬಾಪೂಜಿ ಪ್ರಬಂಧ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ಪ್ರೀತಿ ಮಾ. ಬಿಜ್ಜರಗಿ, ಸಾನಿಯಾ.ಅ.ಕೊಂಡಿ, ಬೋರಮ್ಮ ತಾವರಖೇಡ ಹಾಗೂ ಪದವಿಪೂರ್ವ ವಿಭಾಗದಲ್ಲಿ ಆರತಿ ಕುಂಬಾರ, ರಾಗಿಣಿ ಬಗಲಿ, ಭಾಗ್ಯಶ್ರೀ ಮಡಿವಾಳರ ಮತ್ತು ಪದವಿ/ಸ್ನಾತಕೋತ್ತರ ಪದವಿ ವಿಭಾಗದಲ್ಲಿ ನಸೀಮಾ ಚಪ್ಪರಬಂದ, ಸುಚಿತ್ರಾ ಎಸ್.ಬಿರಾದಾರ ಹಾಗೂ ದೀಪಾ ಚೋರಮುಲೆ ಇವರಿಗೆ ಬಹುಮಾನ ಮತ್ತು ಪ್ರಮಾಣಪತ್ರ ವಿತರಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.