ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಜನ್ಮ ದಿನಾಚರಣೆಯನ್ನು ನಗರದ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಮಾತನಾಡಿ, ಮಹಾತ್ಮಾ ಗಾಂಧೀಜಿ, ಶಾಸ್ತ್ರೀಜಿಯವರ ಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಗಾಂಧೀಜಿ, ಶಾಸ್ತ್ರೀಜಿಯವರು ದೇಶಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ. ಇಂತಹ ಸಂದರ್ಭಗಳಲ್ಲಿ ಮಹಾತ್ಮರ ನೆನಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಬಡತನದಲ್ಲಿಯೇ ಹುಟ್ಟಿ ಬಡತನಲ್ಲಿಯೇ ಬೆಳೆದು ಕೊನೆಗೆ ಬಡತನದಲ್ಲಿಯೇ ನಿಧನರಾದ ಭಾರತದ ಏಕೈಕ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮಹಾತ್ಮಾ ಗಾಂಧೀಜಿ, ಲಾಲ್‌ಬಹಾದ್ದೂರ ಶಾಸ್ತ್ರಿ ವೃತ್ತಕ್ಕೆ ತೆರಳಿ ಪುಷ್ಪಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ರಮೇಶ ಭೂಸನೂರ, ಬಿಜೆಪಿ ಮುಖಂಡ ವಿಜುಗೌಡ ಪಾಟೀಲ, ಮಹಾನಗರ ಪಾಲಿಕೆ ಸದಸ್ಯರಾದ ರಾಹುಲ ಜಾಧವ, ಮಲ್ಲಿಕಾರ್ಜುನ ಗಡಗಿ, ಎಸ್.ಎ. ಪಾಟೀಲ, ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ಈರಣ್ಣ ರಾವೂರ, ಮಳುಗೌಡ ಪಾಟೀಲ, ಸಾಬು ಮಾಶ್ಯಾಳ, ನಗರ ಅಧ್ಯಕ್ಷ ಶಂಕರ ಹೂಗಾರ, ಮಹಿಳಾ ಮೋರ್ಚಾ ನಗರ ಅಧ್ಯಕ್ಷೆ ಲಕ್ಷ್ಮಿ ಕನ್ನೊಳ್ಳಿ, ಓಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಡಬ್ಬಿ, ವಿಜಯ ಜೋಶಿ, ಸಂಜಯ ಪಾಟೀಲ ಕನಮಡಿ, ರಾಜಕುಮಾರ ಸಗಾಯಿ, ಗುರುಲಿಂಗಪ್ಪ ಅಂಗಡಿ, ರಾಜೇಶ ತವಸೆ, ಉದಯ ಕನ್ನೋಳ್ಳಿ, ಕೃಷ್ಣಾ ಗುನಾಳಕರ, ಮಲ್ಲಮ್ಮ ಜೋಗೂರ, ಮಧು ಪಾಟೀಲ, ರಾಜ ಲಕ್ಷ್ಮೀ, ನೀತಾ ದೇಸಾಯಿ, ಗೀತಾ ಚೌಧರಿ, ಸುಸ್ಮೀತಾ ವಾಂಡಕರ, ಸೈನಾಜ, ರೂಗಿ ಮಠ, ಸುವರ್ಣಾ ಕುರ್ಲೆ, ಜಗದೀಶ ಮುಚ್ಚಂಡಿ, ವಿಠ್ಠಲ ನಡುವಿನಕೇರಿ, ಆನಂದ ಮುಚ್ಚಂಡಿ, ವಿಕಾಸ ಪದಕಿ, ಪಾಪುಸಿಂಗ ರಜಪೂತ, ಪ್ರವೀಣ ಕೂಡಗಿ, ಪ್ರವೀಣ ವಂದಾಲಮಠ, ರಾಚು ಬಿರಾದಾರ, ರಾಜು ವಾಲಿ, ಪ್ರಕಾಶ ಚವ್ಹಾಣ, ಪ್ರವೀಣ ನಾಟಿಕಾರ, ಪ್ರೇಮ ಕಲಘಟಗಿ, ಮಹಾಂತೇಶ ಹುಲ್ಲೂರ, ದತ್ತಾ ಗೋಲಾಂಡೆ ಸೇರಿದಂತೆ ಬಿಜೆಪಿ ಮಹಿಳಾ ಪದಾಧಿಕಾರಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

