ಬಿ ಎಲ್ ಡಿ ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಕಾಲೇಜನಲ್ಲಿ ಗಾಂಧಿ-ಶಾಸ್ತ್ರಿ ಜಯಂತಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ದೇಶಕ್ಕೆ ಮಹಾತ್ಮ ಗಾಂಧೀಜಿ ಮತ್ತು ಲಾಲ ಬಹಾದ್ದೂರ್ ಶಾಸ್ತಿಯವರ ಅವರ ಕೊಡುಗೆ ಅಪಾರವಾದದ್ದು, ಭಾರತಕ್ಕೆ ಸ್ವಾತಂತ್ರ‍್ಯ ದೊರಕಿಸಿಕೊಡಲು ಅಹಿಂಸಾ ಮಾರ್ಗದಲ್ಲಿ ಹೋರಾಟ ಮಾಡಿದ ಮಹಾನ್ ವ್ಯಕ್ತಿ ಮಹಾತ್ಮ ಗಾಂಧೀಜಿ ಸ್ವಾತಂತ್ರ‍್ಯಕ್ಕಾಗಿ ದಿಟ್ಟ ಹೋರಾಟ ನಡೆಸಿದ ಗಾಂಧೀಜಿಯವರ ಸತ್ಯ ಅಹಿಂಸೆಯ ಸಿದ್ಧಾಂತ ಬೋಧನೆಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ದೆ ಹೇಳಿದರು.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ ಬಹಾದ್ದೂರ್ ಶಾಸ್ತ್ರಿ ಜಯಂತಿಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ವೇಳೆ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಉಷಾದೇವಿ ಹಿರೇಮಠ ಮಾತನಾಡಿ, ಮಹಾತ್ಮ ಗಾಂಧೀಜಿ ಮತ್ತು ಲಾಲ ಬಹಾದ್ದೂರ್ ಶಾಸ್ತಿಯವರ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅವಶ್ಯಕತೆ ಇದೆ. ಅದೇ ರೀತಿಯಾಗಿ ಲಾಲಬಹಾದ್ದೂರ ಶಾಸ್ತ್ರೀಜಿಯವರ ಕೊಡುಗೆಯನ್ನು ನಾವು ಸ್ಮರಿಸಬೇಕಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಉಪ ಪ್ರಾಚಾರ್ಯ ಡಾ.ಅನೀಲ.ಬಿ.ನಾಯಕ, ಪಿಯುಸಿ ಪ್ರಾಚಾರ್ಯ ಪ್ರೊ.ಸಿ.ಬಿ.ಪಾಟೀಲ, ಐಕ್ಯೂಎಸಿ ಸಂಯೋಜಕ ಡಾ.ಪಿ.ಎಸ್.ಪಾಟೀಲ್, ದೈಹಿಕ ನಿರ್ದೇಶಕ ಎಸ್,ಕೆ,ಪಾಟೀಲ, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಡಾ.ಶ್ರೀನಿವಾಸ ದೊಡ್ಡಮನಿ, ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ಎನಸಿಸಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

