ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಪಟ್ಟಣದ ಪಂಚಾಯಿತಿ ಹಾಗೂ ತಹಶೀಲ್ದಾರ ಕಾರ್ಯಾಲಯಗಳಲ್ಲಿ ಗಾಂಧಿ ಹಾಗೂ ಶಾಸ್ತ್ರೀಜಿ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಲಾಯಿತು.
ಪಟ್ಟಣದ ಹೊಸನಗರದ ಹಳೇ ಕೃಷಿ ಕೇಂದ್ರದ ಆವರಣದಲ್ಲಿ ಕಿರಿಯ ಆರೋಗ್ಯ ನಿರೀಕ್ಷಕ ಫಿರೋಜ್ ಮುಲ್ಲಾ ನೇತೃತ್ವದಲ್ಲಿ ಪೌರಕಾರ್ಮಿಕರು ಸ್ವಚ್ಛತಾ ಕಾರ್ಯ ನೆರವೇರಿಸಿದರು.
ನಂತರ ಸದಸ್ಯರು ಹಾಗೂ ಸಿಬ್ಬಂದಿ ಸಸಿ ನೆಟ್ಟು ನೀರುಣಿಸಿದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಸದಯ್ಯನಮಠದ ವೀರಗಂಗಾಧರ ಶ್ರೀಗಳು ಮಾತನಾಡಿದರು.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ, ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ ಸದಸ್ಯರಾದ ಕಾಸುಗೌಡ ಬಿರಾದಾರ(ಜಲಕತ್ತಿ), ಕಾಸು ಜಮಾದಾರ, ಸುಮಂಗಲಾ ಸೇಬೆನವರ, ಸಿಂಧೂರ ಡಾಲೇರ, ಸಿಬ್ಬಂದಿ ಮುತ್ತುರಾಜ ಹಿರೇಮಠ, ನಾಮ ನಿರ್ದೇಶಿತ ಸದಸ್ಯರು ಹಾಗೂ ಪೌರ ಕಾರ್ಮಿಕರು ಇದ್ದರು.
ತಹಶೀಲ್ದಾರ ಕಾರ್ಯಾಲಯ: ತಹಶೀಲ್ದಾರ ಪ್ರಕಾಶ ಸಿಂದಗಿ ನೇತೃತ್ವದಲ್ಲಿ ಕಾರ್ಯಾಲಯದ ಆವರಣವನ್ನು ಸ್ವಚ್ಛಗೊಳಿಸಿ ಗಾಂಧಿ ಹಾಗೂ ಶಾಸ್ತ್ರೀಜೀ ಜಯಂತಿ ಆಚರಿಸಲಾಯಿತು.
ಬಸವಶರಣ ಸೇವಾ ಸಂಗಮ ಸಮಿತಿಯ ಅಧ್ಯಕ್ಷ ಸಂಗಪ್ಪಣ್ಣ ತಡವಲ್, ವಚನ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಜೆ.ಆರ್.ಬಿರಾದಾರ, ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ ಹಾಗೂ ತಹಶೀಲ್ದಾರ ಮಾತನಾಡಿದರು.
ಶಿರಸ್ತೇದಾರ ಸುರೇಶ ಮ್ಯಾಗೇರಿ, ಅಮೋಘಸಿದ್ಧ ದಳವಾಯಿ, ಕುಮಾರ ಅವರಾದಿ, ಚನಬಸು ಹೊಸಮನಿ, ಕಿಶೋರ ರಾಠೋಡ, ಆಕಾಶ ಮೇತ್ರಿ, ರಾಜಕುಮಾರ ಕಂಠಿ, ರಸೂಲ್ ಆಲಮೇಲ ಇದ್ದರು.

