Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಹಿಂಸೆಯಿಂದಲೇ ಸ್ವಾತಂತ್ರ‍್ಯ ಚಳುವಳಿ ಮುನ್ನಡೆಸಿದ ಗಾಂಧೀಜಿ
(ರಾಜ್ಯ ) ಜಿಲ್ಲೆ

ಅಹಿಂಸೆಯಿಂದಲೇ ಸ್ವಾತಂತ್ರ‍್ಯ ಚಳುವಳಿ ಮುನ್ನಡೆಸಿದ ಗಾಂಧೀಜಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ ವಿವಿಧೆಡೆ ಗಾಂಧೀಜಿ ಹಾಗೂ ಶಾಸ್ತ್ರೀಜಿ ಜಯಂತಿ ಆಚರಣೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ದೇಶದ ಸ್ವಾತಂತ್ರ‍್ಯಕ್ಕಾಗಿ ಅನೇಕ ಚಳುವಳಿ ಹಾಗೂ ಹೋರಾಟಗಳನ್ನು ರೂಪಿಸಿ ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ‍್ಯ ಚಳುವಳಿಯನ್ನು ಮುನ್ನಡೆಸಿದ ಮಹಾತ್ಮ ಗಾಂಧಿಯವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಅವರ ಹಾದಿಯಲ್ಲಿ ಸಾಗೋಣ ಎಂದು ಪದ್ಮರಾಜ ಮಹಿಳಾ ಕಾಲೇಜಿನ ಉಪನ್ಯಾಸಕಿ ಹೇಮಾ ಹಿರೇಮಠ ಹೇಳಿದರು.
ಪಟ್ಟಣದ ಭುವನೇಶ್ವರಿ ವಿದ್ಯಾವರ್ಧಕ ಸಂಘದ ಶ್ರೀ ಸಂಗಮೇಶ್ವರ ಪಾರ್ಮಸಿ ಹಾಗೂ ಕಾವ್ಯಾ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಹಮ್ಮಿಕೊಂಡ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿ ಆಚರಣೆಯಲ್ಲಿ ಮಾತನಾಡಿದ ಅವರು, ಗಾಂಧೀಜಿ ಅವರ ಸತ್ಯ, ಸಮಾನತೆ, ಅಹಿಂಸೆ, ಶಾಂತಿಯ ಬಹುದೊಡ್ಡ ಪ್ರತಿಪಾದಕರಾಗಿದ್ದಾರೆ. ಇಂದು ವಿಶ್ವದಾದ್ಯಂತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.
ಈ ವೇಳೆ ಕಾನಿಪ ಸಂಘದ ಅಧ್ಯಕ್ಷ ಆನಂದ ಶಾಬಾದಿ, ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ಕಸಾಪ ಅಧ್ಯಕ್ಷ ಶಿವಾನಂದ ಬಡಾನೂರ, ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ನಾಗರಬೆಟ್ಟ, ಸಂದೀಪ, ಸಂಗನಗೌಡ ಪಾಟೀಲ ಅಗಸಬಾಳ ಸೇರಿದಂತೆ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
ಶ್ರೀ ಪದ್ಮರಾಜ ಮಹಿಳಾ ಕಾಲೇಜು: ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಕಾಲೇಜಿನಲ್ಲಿ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿಯನ್ನು ಆಚರಣೆ ಮಾಡಲಾಯಿತು.
ಇದೇ ವೇಳೆ ಪ್ರಾಚಾರ್ಯ ಎಸ್.ಎಮ್.ಹೈಯಾಳಕರ, ಎಸ್.ಎಂ.ಪೂಜಾರಿ, ಉಪನ್ಯಾಸಕರಾದ ಜಿ.ಎಸ್.ಕುಲಕರ್ಣಿ, ಮಹಾಂತೇಶ ನೂಲಾನವರ, ಎಸ್.ಸಿ.ದುದ್ದಗಿ, ಹೇಮಾ ಹಿರೇಮಠ, ಹೇಮಾ ಕಾಸರ, ಯು.ಸಿ.ಪೂಜೇರಿ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅನೇಕರಿದ್ದರು.
ತಾಲೂಕು ಸಾರ್ವಜನಿಕ ಆಸ್ಪತ್ರೆ: ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿಯನ್ನು ಆವರಣೆ ಮಾಡಲಾಯಿತು.
ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಎ.ಎ ಮಾಗಿ, ರಾಜಶೇಖರ ನರಗೋದಿ, ಡಾ.ಮಹಾಂತೇಶ ಹಿರೇಮಠ, ಎಂ.ಪಿ ಸಾಗರ, ಡಾ. ಬಡಿಗೇರ ಹಾಗೂ ಡಾ.ರಾಠೋಡ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.
ಮಹಿಳಾ ಸಾಂತ್ವಾನ ಸಹಾಯವಾಣಿ ಕೇಂದ್ರ: ಪಟ್ಟಣದ ಬಂದಾಳ ರಸ್ತೆಯಲ್ಲಿರುವ ಮಹಿಳಾ ಸಾಂತ್ವಾನ ಸಹಾಯವಾಣಿ ಕೇಂದ್ರದಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿಯನ್ನು ಆವರಣೆ ಮಾಡಲಾಯಿತು.
ಈ ವೇಳೆ ಆಪ್ತಸಮಾಲೋಚಕಿ ಸುಜಾತಾ ಕಲಬುರ್ಗಿ, ರಶ್ಮಿ ನೂಲಾನವರ, ವಿದ್ಯಾ ದೇಸಾಯಿ ಇದ್ದರು.
ಆರ್.ಡಿ.ಪಾಟೀಲ ಕಾಲೇಜು: ಪಟ್ಟಣದ ಆರ್.ಡಿ.ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್. ಘಟಕದ ವತಿಯಿಂದ ಹಮ್ಮಿಕೊಂಡ ಮಹಾತ್ಮಾ ಗಾಂಧೀಜಿ ಹಾಗೂ ಲಾಲಾಬಹದ್ದೂರ ಶಾಸ್ತ್ರೀಜಿ ಅವರ ಜಯಂತಿ ಹಾಗೂ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ಉಪನ್ಯಾಸಕರಾದ ಶಿವಶರಣ ಬೂದಿಹಾಳ, ಎನ್.ಬಿ.ಪೂಜಾರಿ, ಬಿ.ಬಿ.ಜಮಾದಾರ, ಎಸ್.ಎಚ್.ಜಾಧವ, ಎಸ್.ಜಿ.ಮಾರ್ಸನಳ್ಳಿ, ಎಸ್.ಸಿ.ಜೋಗೂರ, ಪ್ರಸನ್ ಜೋಗೂರ, ರಾಜೇಶ್ವರಿ ಗಾಣಗೇರ್, ವ್ಹಿ.ಕೆ.ಹಿರೇಮಠ, ಶಿವರಾಜ ಕುಂದಗೋಳ, ಸುಭಾಸ ಹೊಸಮನಿ, ವ್ಹಿ.ಪಿ.ನಂದಿಕೋಲ, ವಿಜಯಲಕ್ಷ್ಮಿ ಕನ್ನೊಳ್ಳಿ, ಗವಿಸಿದ್ದಪ್ಪ ಆನೆಗುಂದಿ, ಎಂ.ಐ.ಮುಜಾವರ್ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಇದ್ದರು.
ಪ್ರೇರಣಾ ಪಬ್ಲಿಕ್ ಶಾಲೆ: ಪಟ್ಟಣದ ನಾಗೂರ ಬಡಾವಣೆ ಹಾಗೂ ರಾಂಪೂರ ರಸ್ತೆಯಲ್ಲಿರುವ ಶ್ರೀ ಸಮರ್ಥ ವಿದ್ಯಾವಿಕಾಸ ವಿವಿದೊದ್ದೇಶಗಳ ಸಂಸ್ಥೆಯ ಪ್ರೇರಣಾ ಶಿಶುನಿಕೇತನ, ವಿದ್ಯಾನಿಕೇತನ ಹಾಗೂ ಪ್ರೇರಣಾ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ ಶಾಸ್ತಿç ಜಯಂತಿಯನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ, ನಿರ್ದೇಶಕ ಪಿ.ಡಿ.ಕುಲಕರ್ಣಿ, ಮುಖ್ಯಗುರಮಾತೆ ಎಮ್.ಪಿ.ಬುಕ್ಕಾ, ಶ್ರಾವ್ಯ ಗುಮಶೆಟ್ಟಿ, ಸಾನ್ವಿ ಬಾಗಲಕೋಟ ಪ್ರಾರ್ಥಿಸಿದರು. ಬಿ.ಎಸ್. ಪಾಟೀಲ ಸ್ವಾಗತಿಸಿದರು. ಮತ್ತು ಬಿ.ಎಸ್. ಸಜ್ಜನ, ಆರ್.ಎಮ್. ಪಕೀರಪುರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುನಮ್ ಮತ್ತು ಶ್ರೀನಿಧಿ ಭರತನಾಟ್ಯ ಪ್ರದರ್ಶಿಸಿದರು. ಸತೀಶ ಕುಲಕರ್ಣಿ ನಿರೂಪಿಸಿದರು. ವಿ.ಎ.ನಾಯಕ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು, ಪಾಲಕರು ಮತ್ತು ವಿದ್ಯಾರ್ಥಿಗಳಿದ್ದರು.
ವಿದ್ಯಾಚೇತನ ಶಾಲೆ: ಪಟ್ಟಣದ ಹೂಗಾರ ಲೇಔಟ್‌ನಲ್ಲಿರುವ ವಿದ್ಯಾಚೇತನ ಶಾಲೆಯಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿಯನ್ನು ಆವರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕುಸುಮಾ ಯಾಳಗಿ, ಸಕ್ಕುಬಾಯಿ ಡಾಂಗಿ, ವಿಕಾಸ ಚೌರ, ಅಕ್ಷಯ ದೀಕ್ಷಾ, ಸುಮಾ ಬಿರಾದಾರ, ರೂಪಾ, ಪ್ರಗತಿ ಸೇರಿದಂತೆ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.