Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಾಲ ವಿಕಾಸ ಅಕಾಡೆಮಿಯಿಂದ ಹೃದಯಸ್ಪರ್ಶಿ ಕಾರ್ಯಕ್ರಮ :ಸಚಿವ ಲಾಡ್
(ರಾಜ್ಯ ) ಜಿಲ್ಲೆ

ಬಾಲ ವಿಕಾಸ ಅಕಾಡೆಮಿಯಿಂದ ಹೃದಯಸ್ಪರ್ಶಿ ಕಾರ್ಯಕ್ರಮ :ಸಚಿವ ಲಾಡ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಕಾರ್ಯವೈಖರಿಗೆ ಸಚಿವ ಸಂತೋಷ ಲಾಡ್ ಶ್ಲಾಘನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಈ ನಾಡಿನ ಮಕ್ಕಳಿಗಾಗಿ ಹಾಗೂ ಅದರಲ್ಲೂ ವಿಶೇಷವಾಗಿ ರಾಜ್ಯಾದ್ಯಂತ ಇರುವ ಬಾಲಮಂದಿರದ ಮಕ್ಕಳಿಗಾಗಿ ಹಮ್ಮಿಕೊಂಡಿರುವ ವಿಶೇಷ ಹೃದಯಸ್ಪರ್ಶಿ ಕಾರ್ಯಕ್ರಮಗಳನ್ನು ಕಂಡಾಗ ಹೃದಯ ತುಂಬಿ ಬರುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸ್ನೇಹಿತರಾದ ಸಚಿವ ಎಂ.ಬಿ.ಪಾಟೀಲರು ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ನಮ್ಮ ಸರ್ಕಾರ ಸೂಕ್ತ ವ್ಯಕ್ತಿಯನ್ನು ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರನ್ನಾಗಿ ಮಾಡಿದೆ ಎಂದು ಸಚಿವ ಸಂತೋಷ ಲಾಡ್ ಶ್ಲಾಘಿಸಿದರು.
ಧಾರವಾಡದ ಹೊರವಲಯ ಹಳ್ಳಿಗೇರಿಯ ಸಮೀಪದಲ್ಲಿರುವ ನೇಚರ್ ಫಸ್ಟ್ ಇಕೋ ವಿಲೇಜ್ ನಲ್ಲಿ ರಾಜ್ಯದ ಬಾಲಮಂದಿರದ ಮಕ್ಕಳಿಗಾಗಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಆಯೋಜಿಸಿರುವ ರಾಜ್ಯ ಮಟ್ಟದ ಕಥಾ ಕಮ್ಮಟ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಹಾತ್ಮ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಜಯಂತೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಸಂಗಮೇಶ ರಂತಹ ತಾಯಿ ಹೃದಯದ ಗೆಳೆಯ ನನ್ನ ಸ್ನೇಹಿತರಾಗಿರುವುದಕ್ಕೆ ನನಗೆ ಹೆಮ್ಮೆ ಇದೆ ಎಂದ ಸಚಿವರು, ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ಎರಡು ಕೋಟಿಗೂ ಅಧಿಕ ಮಕ್ಕಳನ್ನ ಪ್ರತಿನಿಧಿಸುವ ಕರ್ನಾಟಕ ಬಾಲ ವಿಕಾಸ ಅಕಾಡೆಮಿಗೆ ಹೆಚ್ಚಿನ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದರು.
ವೇದಿಕೆ ಮೇಲಿದ್ದ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವರು ಧಾರವಾಡ ಜಿಲ್ಲೆಗೆ ಬರುವ ಸಿ ಎಸ್ ಆರ್ ಫಂಡನ್ನು ಕೂಡ ಅಕಾಡೆಮಿ ಕಾರ್ಯ ಚಟುವಟಿಕೆಗಳಿಗೆ ಒದಗಿಸಿ ಕೊಡುವಂತೆ ಸೂಚಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ನನಗೆ ಗೊತ್ತಿರುವಂತೆ ದೇಶದಲ್ಲಿ ಮಕ್ಕಳಿಗಾಗಿ ಕೆಲಸ ಮಾಡಲು ಅಸ್ತಿತ್ವದಲ್ಲಿರುವ ಏಕೈಕ ಅಕಾಡೆಮಿ ನಮ್ಮೆಲ್ಲರ ಹೆಮ್ಮೆಯ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯಾಗಿದೆ, ಸಚಿವರು ಹೇಳಿದಂತೆ ಸೂಕ್ತ ವ್ಯಕ್ತಿಯನ್ನು ಸರಕಾರ ಅಧ್ಯಕ್ಷರನ್ನಾಗಿ ಮಾಡಿದೆ. ಸಂಗಮೇಶ ಅವರ ಮಕ್ಕಳ ಬಗೆಗಿನ ಕಾಳಜಿಯನ್ನು ನಾನು ಹೃದಯಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ಹೇಳಿದರು.
ಇನ್ನೋರ್ವ ಮುಖ್ಯ ಅತಿಥಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಶಶಿಕುಮಾರ್ ಮಾತನಾಡಿ, ಮಕ್ಕಳಿಗಾಗಿ ಇಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ನೋಡಿದಾಗ ನನಗೆ ತುಂಬಾ ಸಂತೋಷವಾಗುತ್ತದೆ, ಮಕ್ಕಳು ಇದರ ಪ್ರಯೋಜನ ಪಡೆದು ಎತ್ತರಕ್ಕೆ ಬೆಳೆಯಬೇಕು ಎಂದು ಹಾರೈಸಿದರು.
ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಮುಖಂಡರಾದ ಎಸ ಆರ್ ಪಾಟೀಲ, ಮಲ್ಲನಗೌಡ ಪಾಟೀಲ, ಬಸವರಾಜ್ ಮರಿತಮ್ಮನವರ, ಯೋಜನಾಧಿಕಾರಿ ಭಾರತಿ ಶೆಟ್ಟರ, ಉಪನಿರ್ದೇಶಕ ರತ್ನಾಕರ, ದೀಪಾ ಜಾವೂರ, ಹಳ್ಳಿಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸರ್ವ ಸದಸ್ಯರು ಎರಡನೇ ಹಂತದಲ್ಲಿ ವಿವಿಧ 9 ಜಿಲ್ಲೆಗಳಿಂದ ಆಗಮಿಸಿದ ಮುದ್ದು ಮಕ್ಕಳು ಸುತ್ತಲಿನ ಗ್ರಾಮಗಳ ಹಿರಿಯರು ಉಪಸ್ಥಿತರಿದ್ದರು.

” ಮಕ್ಕಳೆಂದರೆ ದೇವರ ಸಮಾನ. ಅಂತಹ ಎರಡು ಕೋಟಿ ದೇವರುಗಳ ಸೇವೆ ಮಾಡುವ ಅವಕಾಶ ನನಗೆ ದೊರೆತದ್ದು ನನ್ನ ಸೌಭಾಗ್ಯ. ಸಚಿವರ ಹಾಗೂ ತಮ್ಮೆಲ್ಲರ ಸಹಕಾರ ಮಾರ್ಗದರ್ಶನದಲ್ಲಿ ಈ ನಾಡಿನ ಮುದ್ದು ಮಕ್ಕಳ ಶ್ರೇಯೋಭಿವೃದ್ಧಿಗಾಗಿ ದುಡಿದು, ನಿಮ್ಮೆಲ್ಲರ ಪ್ರೀತಿಯ ಋಣವನ್ನ ತೀರಿಸುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.”
– ಸಂಗಮೇಶ ಬಬಲೇಶ್ವರ
ಅಧ್ಯಕ್ಷರು, ಕರ್ನಾಟಕ ಬಾಲವಿಕಾಸ ಅಕಾಡೆಮಿ

” ದೇವರ ಸ್ವರೂಪರಾದ ನಾಡಿನ ಬಾಲಮಂದಿರದ ಮಕ್ಕಳನ್ನು ಪರಿಸರ ಸ್ನೇಹಿಯಾದ ಸಕಲ ಸೌಲಭ್ಯಗಳನ್ನು ಒಳಗೊಂಡಿರುವ ನಿಸರ್ಗದ ಮಡಿಲಿನಲ್ಲಿರುವ ರೆಸಾರ್ಟ್ ನಲ್ಲಿ ಮಕ್ಕಳನ್ನು ಕರೆತಂದು ಅವರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರ ಕಾರ್ಯ ನಿಜಕ್ಕೂ ನನಗೆ ಅತ್ಯಂತ ಆತ್ಮತೃಪ್ತಿಯನ್ನು ತಂದಿದೆ. ಅಕಾಡೆಮಿಯಿಂದ ರಾಜ್ಯಮಟ್ಟದಲ್ಲಿ ಸಂಗಮೇಶ್ ಅವರು ಬಾಲ ಮಂದಿರದ ಮಕ್ಕಳಿಗಾಗಿ ಕೈಗೊಳ್ಳುವ ಎಲ್ಲಕಾರ್ಯಕ್ರಮಗಳಿಗೆ ನಮ್ಮ ಫೌಂಡೇಶನ್ ವತಿಯಿಂದ ಎಲ್ಲ ಸಹಕಾರ ನೀಡುತ್ತೇನೆ.”
– ಸಂತೋಷ ಲಾಡ್
ಸಚಿವರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.