ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳಗಳಿಗೆ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಸಾಮಾನ್ಯ ವರ್ಗದ ರೈತರಿಗೆ ೫ ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ನೀಡಲು ಅವಕಾಶವಿದ್ದು, ಮೊದಲನೇ ೨ ಹೆಕ್ಟೇರ್ ವರೆಗೆ ಶೇ.೯೦ ರಷ್ಟು ಹಾಗೂ ೨ ಹೆಕ್ಟೇರ್ ಮೇಲ್ಪಟ್ಟು ೫ ಹೆಕ್ಟೇರ್‌ವರೆಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಶೇ.೪೫ರಷ್ಟು ಸಹಾಯಧನ ಪಡೆದುಕೊಳ್ಳಲು ಅವಕಾಶ ವಿರುತ್ತದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರು ಈ ಹಿಂದೆ ಅಳವಡಿಸಿಕೊಂಡಿದ್ದ ಸೂಕ್ಷ ನೀರಾವರಿ ಘಟಕ ಹಾಳಾಗಿದ್ದಲ್ಲಿ ಅಥವಾ ಕಾರ್ಯ ನಿರ್ವಹಿಸದೇ ಇದ್ದಲ್ಲಿ ೦೭ ವರ್ಷಗಳ ನಂತರ ಅದೇ ಜಮೀನಿಗೆ ಮತ್ತೊಮ್ಮೆ ಸೂಕ್ಷ್ಮ ನೀರಾವರಿ ಪದ್ಧತಿ ಅಳವಡಿಸಿಕೊಂಡಲ್ಲಿ ಸಹಾಯಧನ ಪಡೆದುಕೊಳ್ಳಲು ಅವಕಾಶವಿರುತ್ತದೆ. ರೈತರು ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಜಯಪುರ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
