ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜಿಲ್ಲೆಯ ಸಿಂದಗಿ ತಾಲೂಕ ಪಂಚಾಯತ್ ಸಭಾಭವನದಲ್ಲಿ ಅಕ್ಟೋಬರ್ ೯ ರಂದು ಬೆಳಿಗ್ಗೆ ೧೧ ಗಂಟೆಯಿಂದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕರು (ಮೊ:೯೩೬೪೦೬೨೫೨೮) ಉಪಾಧೀಕ್ಷಕರ (ಮೊ:೯೩೬೪೦೬೨೫೫೭), ಪೊಲೀಸ್ ಇನ್‌ಸ್ಪೆಕ್ಟರ್-೧ (ಮೊ:೯೩೬೪೦೬೨೬೪೦), ಪೊಲೀಸ್ ಇನ್ಸಪೆಕ್ಟರ್-೨ (ಮೊ:೯೩೬೪೦೬೨೬೩೯) ಇವರು ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಅಹವಾಲು ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ಸಿಬ್ಬಂದಿಗಳ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಅಲ್ಲಿನ ಸ್ಥಳೀಯ ಅಧಿಕಾರಿಗಳ ಸಹಯೋಗದಲ್ಲಿ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು ಹಾಗೂ ಸರಕಾರಿ ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ, ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ದೂರುಗಳಿಗಾಗಿ ಕಚೇರಿ ದೂರವಾಣಿ: ೦೮೩೫೨-೨೫೫೩೩೩, ೨೫೭೭೮೬, ೨೯೫೦೭೪ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.
