ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ೧೧ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ಗಾಂಧಿ ವೃತ್ತದಲ್ಲಿರುವ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜ್, ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು, ಪಿಡಿಜೆ ಕಾಲೇಜು ಹಾಗೂ ವಿ.ಬಿ.ದರಬಾರ್ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಮಂಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಪರೀಕ್ಷೆಗಳು ಅತ್ಯಂತ ಸುಗಮ ಹಾಗೂ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸುವಂತೆ ಸಂಬಂಧಿಸಿದವರಿಗೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಕೆ ಹೊಸಮನಿ ಇದ್ದರು.
ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಯ ಪರೀಕ್ಷೆಗೆ ಜಿಲ್ಲೆಯಲ್ಲಿ ೪,೯೨೦ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪರೀಕ್ಷೆಗೆ ೧,೪೪೯ ಅಭ್ಯರ್ಥಿಗಳು ಗೈರಾಗಿದ್ದು, ೩,೪೭೧ ಅಭ್ಯರ್ಥಿಗಳು ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

