ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರೈತರ ಕೃಷಿ ಪಂಪಸೆಟ್‌ಗಳಿಗೆ ಸೋಲಾರ ಮುಖಾಂತರ ವಿದ್ಯುತ್ ಸರಬರಾಜು ಮಾಡುವ ಪಿಎಂ ಕುಸುಮ್ ಪೀಡರ್ ಲೇವಲ್ ಸೋಲರೈಸೆಷನ್ ಯೋಜನೆಯಡಿ ಸೌರ ಘಟಕಗಳನ್ನು ಸ್ಥಾಪಿಸಲು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಸೋಲವಾಡಗಿ ಗ್ರಾಮದ ರಿಸನಂ.೧೫೯ರ ೧೯ ಎಕರೆ ೧೪ ಗುಂಟೆ ಪೈಕಿ ೧೧ ಎಕರೆ ಸರಕಾರಿ ಮುಫತ್ ಗಾಯರಾಣ ಜಮೀನು ಕಂದಾಯ ಇಲಾಖೆಯಿಂದ ಇಂಧನ ಇಲಾಖೆಗೆ ಕಾಯ್ದಿರಿಸಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕರು ಆಕ್ಷೇಪಣೆಗಳಿದ್ದಲ್ಲಿ ಈ ಅಧಿಸೂಚನೆ ಹೊರಡಿಸಿದ ೩೦ ದಿನಗಳೊಳಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಲಿಖಿತವಾಗಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
