Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಾಣಿಗ ಸಮಾಜದಲ್ಲಿ ಸಂಸ್ಕಾರ ಹಾಸುಹೊಕ್ಕಾಗಿದೆ :ಬೆಳ್ಳುಬ್ಬಿ
(ರಾಜ್ಯ ) ಜಿಲ್ಲೆ

ಗಾಣಿಗ ಸಮಾಜದಲ್ಲಿ ಸಂಸ್ಕಾರ ಹಾಸುಹೊಕ್ಕಾಗಿದೆ :ಬೆಳ್ಳುಬ್ಬಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಯದೇವ ಜಗದ್ಗುರುಗಳ 85ನೇ ಜಯಂತ್ಯುತ್ಸವ | 15ನೇ ಪ್ರತಿಭಾ ಪುರಸ್ಕಾರ ಸಮಾರಂಭ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಾಯಕನಿಷ್ಠ ಗಾಣಿಗ ಸಮಾಜದಲ್ಲಿ ಪ್ರಾಮಾಣಿಕತೆ, ಸ್ವಾಭಿಮಾನ ಸಂಸ್ಕಾರ ಹಾಸುಹೊಕ್ಕಾಗಿದೆ. ಗಾಣಿಗರು ಸರ್ವ ಸಮಾಜಗಳೊಂದಿಗೆ ಪ್ರೀತಿಯಿಂದ ಬದುಕು ಸಾಗಿಸುತ್ತಾ ಎಲ್ಲ ರೀತಿಯಲ್ಲೂ ಶ್ರೀಮಂತರಾಗಬೇಕು ಎಂದು ಸಚಿವ ಎಸ್.ಕೆ.ಬೆಳ್ಳುಬ್ಬಿ ಸಮಾಜಕ್ಕೆ ಕಿವಿಮಾತು ಹೇಳಿದರು.
ನಗರದ ಜಿಲ್ಲಾ‌ ಪಂಚಾಯಿತಿ ಬಳಿಯ ವನಶ್ರೀ ಸಂಸ್ಥಾನ ಮಠದಲ್ಲಿ ಬುಧವಾರ ವಿಜಯಪುರ ಜಿಲ್ಲಾ ಗಾಣಿಗ ಸಮಾಜ ಸಂಘ ಹಾಗೂ ಶ್ರೀ ಜಗದ್ಗುರು ಜಯದೇವ ಶಿವಯೋಗೇಶ್ವರ ಟ್ರಸ್ಟ್ ಸಂಯುಕ್ತಾಶ್ರಯಲ್ಲಿ ಜರುಗಿದ‌ ಜಯದೇವ ಜಗದ್ಗುರುಗಳ‌ 86 ನೇ ಜಯಂತ್ಯುತ್ಸವ ಹಾಗೂ 15 ನೇ ವಾರ್ಷಿಕ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ‌ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಲಿಂ. ಜಯದೇವ ಜಗದ್ಗುರುಗಳು ತಮ್ಮ ಇಡಿ ಬದುಕನ್ನೇ ಸಮಾಜಕ್ಕೆ ಅರ್ಪಿಸಿದ್ದಾರೆ. ಪೂಜ್ಯ ಸಿದ್ದೇಶ್ವರ ಸ್ವಾಮಿಗಳು, ಪ್ರಧಾನಿ ಮೋದಿಯವರನ್ನು ಜಾತಿಗೆ ಸೀಮಿತಗೊಳಿಸುವುದು ಬೇಡ. ಅವರು ವೈಯಕ್ತಿಕ ಸಾಧನೆಯಿಂದ ಬೆಳೆದಿದ್ದು, ಗಾಣಿಗ ಸಮಾಜದಲ್ಲಿ ಹುಟ್ಟಿದ್ದಾರೆಂಬುದು ನಮಗೆ ಹೆಮ್ಮೆ, ಪ್ರೇರಣೆ. ಸಮಾಜವನ್ನು ಇನ್ನಷ್ಟು ಉನ್ನತಿಗೆ ಒಯ್ಯುವ ಜೊತೆಗೆ ಇನ್ನುಳಿದ ಸಮಾಜಗಳನ್ನು ಜೊತೆಗೆ ಕರೆದುಕೊಂಡು‌ ಭವ್ಯ ಭಾರತ ಕಟ್ಟುವಲ್ಲಿ ನಮ್ಮದೇಯಾದ ಕೊಡುಗೆ ನೀಡೋಣ ಎಂದು ಬೆಳ್ಳುಬ್ಬಿ ಕರೆ ನೀಡಿದರು.
ಅಖಿಲ‌ ಭಾರತ ಗಾಣಿಗ ಸಮಾಜದ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರು ಮಾತನಾಡಿ, ಗಾಣಿಗ ಸಮಾಜದ ಸ್ಥಿತಿಗತಿ ಅರಿತು ಹಿರಿಯರ ಪ್ರಯತ್ನದಿಂದ ಸಮಾಜಕ್ಕೆ ಸಿಕ್ಕ 2ಎ ಮೀಸಲಾತಿಗೆ ಕೆಲವಡೆ ಇಂದು ಕುತ್ತು ತರುವ ಕೆಲಸವಾಗುತ್ತಿದೆ. ಲಿಂಗಾಯತ ಗಾಣಿಗರೆಂಬ ಕಾರಣಕ್ಕೆ 5 ಜಿಲ್ಲೆಗಳಲ್ಲಿ ಗಾಣಿಗರಿಲ್ಲ‌ ಎಂದು ಹಿಂದಿನ ಜಯಪ್ರಕಾಶ ಹೆಗ್ಡೆ ಅವರ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಲಿಂಗಾಯತ ಗಾಣಿಗರಿಗೆ 2ಎ ಪ್ರಮಾಣಪತ್ರ ನೀಡಬೇಕೆಂದು ಸುಪ್ರಿಂ ಕೋರ್ಟ್ ಆದೇಶವಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಸುಮಾರು 40-60 ಲಕ್ಷ ಜನಸಂಖ್ಯೆ ಇರುವ ಗಾಣಿಗ ಸಮಾಜದ ಏಲ್ಗೆ ಸಹಿಸದೇ ನಮ್ಮ 2ಎ ಮೀಸಲಾತಿ ಸರಿಸಲು ಕೆಲ ಅಧಿಕಾರಿಗಳು, ಒಂದೆರಡು ಸಮಾಜ ವ್ಯವಸ್ಥಿತವಾಗಿ ಷಡ್ಯಂತರ ಕಾರ್ಯ ಮಾಡುತ್ತಿದ್ದಾರೆ. ಸಾಮಾಜಿಕವಾಗಿ ಶೋಷಣೆಗೆ ಒಳಗಾಗಿರುವ ಗಾಣಿಗ ಸಮಾಜದಲ್ಲಿ 95% ಜನ ಬಡವರಿದ್ದಾರೆ. ಮೀಸಲಾತಿ ಉಳಿವಿಗಾಗಿ ಗಾಣಿಗರೆಲ್ಲರೂ ಒಗ್ಗಟ್ಟಾಗಬೇಕಿದೆ. ಸಮಾಜದ ಪರಮಪೂಜ್ಯರು ಹಾಗೂ ರಾಜಕೀಯ ಧುರೀಣರು, ಮುಖಂಡರನ್ನೊಳಗೊಂಡ ನಿಯೋಗ ರಚಿಸಿಕೊಂಡು ಸಿಎಂ ಅವರಿಗೆ ಭೇಟಿಯಾಗಿ ಸಮಾಜದ ಸ್ಥಿತಿಗತಿ ಮನವರಿಕೆ ಮಾಡುವ ಕೆಲಸ ಮಾಡೋಣ ಎಂದರು.
ಇದೇ ವೇಳೆ ಪತ್ರಕರ್ತ ಬಸವರಾಜ ಉಳ್ಳಾಗಡ್ಡಿ, ಯಶಸ್ವಿ ಉದ್ಯಮಿ ಶರಣು ಸಜ್ಜನ ಅವರಿಗೆ ಸನ್ಮಾನಿಸಲಾಯಿತು. 109 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು. ಗಾಣಿಗ ಸಮಾಜದ ನೂತನ ಜಿಲ್ಲಾ ಘಟಕದ ಪದಾಧಿಕಾರಿಗಳಿಗೆ ಸನ್ಮಾನಿಸಿ ಪದಗ್ರಹಣ ಮಾಡಲಾಯಿತು.
ಜಿಲ್ಲಾ ಗಾಣಿಗ ಸಮಾಜ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಬಾಬು ಸಜ್ಜನ ಪ್ರಾಸ್ತಾವಿಕ ಮಾತನಾಡಿ ಸಂಘದ ಚಟುವಟಿಕೆಗಳನ್ನು ವಿವರಿಸಿದರು.
ಬೀದರಿನ ಸಿದ್ಧಾರೂಢಾಶ್ರಮದ ಶಂಕರಾನಂದ ಸ್ವಾಮೀಜಿ, ವನಶ್ರೀ‌ ಸಂಸ್ಥಾನಮಠದ ಅಧ್ಯಕ್ಷ ಸಿದ್ದಮುತ್ಯಾ, ಹಿರೇರೂಗಿ ಮುಕ್ತಿಮಂದಿರದ ಸುಗಲಾತಾಯಿ ಮಾತೋಶ್ರೀ ಸಾನಿಧ್ಯ ನುಡಿಗಳಾಡಿದರು.
ಸಮಾಜದ ಸಂಘದ ಜಿಲ್ಲಾಧ್ಯಕ್ಷ ಬಿ.ಬಿ.ಪಾಸೋಡಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ‌ ಶಾಸಕರುಗಳಾದ ಜಿ.ಎಸ್.ನ್ಯಾಮಗೌಡ, ಬಿ.ಜಿ.ಪಾಟೀಲ ಹಲಸಂಗಿ, ರಮೇಶ ಭೂಸನೂರ ಸೇರಿದಂತೆ ಜಿಲ್ಲಾ ಗಾಣಿಗ ಸಮಾಜ ಸಂಘ ಹಾಗೂ ಶ್ರೀ ಜಗದ್ಗುರು ಜಯದೇವ ಶಿವಯೋಗೇಶ್ವರ ಟ್ರಸ್ಟ್ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.