Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಾಲಯ ಉದ್ಘಾಟನೆ
(ರಾಜ್ಯ ) ಜಿಲ್ಲೆ

ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಾಲಯ ಉದ್ಘಾಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ತಾಲೂಕಿನ ಇವಣಗಿ ಗ್ರಾಮದ ಆರಾಧ್ಯದೈವ ಲಕ್ಕಮ್ಮದೇವಿ ದೇವಸ್ಥಾನದ ಆವರಣದಲ್ಲಿ ಬುಧವಾರ ಇವಣಗಿ ಗ್ರಾಮದಲ್ಲಿ ನವೆಂಬರ್ ೧೩ ರಂದು ಜರುಗುವ ತಾಲೂಕು ೧೦ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಾಲಯವನ್ನು ಬಸವನಬಾಗೇವಾಡಿ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಕನ್ನಡ ಸಾಹಿತ್ಯಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಕನ್ನಡ ನುಡಿಗಾಗಿ ಅನೇಕರು ಕೊಡುಗೆ ನೀಡಿದ್ದಾರೆ. ಕನ್ನಡ ಸಾಹಿತ್ಯವನ್ನು ಬೆಳೆಸುವ ಉದ್ದೇಶದಿಂದ ನಾಡಿನಲ್ಲಿ ಸಾಹಿತ್ಯ ಸಮ್ಮೇಳನಗಳು ನಿರಂತರವಾಗಿ ನಡೆಯುತ್ತಿವೆ. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಗ್ರಾಮೀಣ ಭಾಗದಲ್ಲಿ ತಾಲೂಕು ೧೦ ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಿದ್ದು ಶ್ಲಾಘನೀಯ. ನವೆಂಬರ್ ೧೩ ರಂದು ಜರುಗುವ ಈ ಸಮ್ಮೇಳನವನ್ನು ಎಲ್ಲ ಕನ್ನಡ ಮನಸ್ಸುಗಳು, ಸಾಹಿತಿಗಳು, ಗ್ರಾಮಸ್ಥರು ಸೇರಿಕೊಂಡು ಸಮ್ಮೇಳನವನ್ನು ಅಚ್ಚುಕಟ್ಟಾಗಿ ಐತಿಹಾಸಿಕ ಸಮ್ಮೇಳನವಾಗುವಂತೆ ಇಂದಿನಿಂದಲೇ ಸನ್ನದ್ಧರಾಗಬೇಕು. ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆಯು ಪಾರದರ್ಶಕವಾಗಿರಬೇಕೆಂಬ ಆಶಯ ನಮ್ಮದಾಗಿದೆ. ಈ ಸಮ್ಮೇಳನದ ಯಶಸ್ವಿಗೆ ಎಲ್ಲರೂ ಸಹಕಾರ ನೀಡಬೇಕೆಂದರು.
ನರಲಸಗಿ ಗ್ರಾಮ ಪಂಚಾಯಿತಿ ಸದಸ್ಯ ಕಾಂತು ಹಿರೇಕುರಬರ ಮಾತನಾಡಿ, ಸಮ್ಮೇಳನದ ಯಶಸ್ವಿಗೆ ಎಲ್ಲ ರೀತಿಯ ಸಹಾಯ-ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಡೋಣೂರ, ಸಿ.ಎಸ್.ಸುಭಾನಪ್ಪನವರ, ಶಿವಯ್ಯ ಹಿರೇಮಠ, ಎಂ.ಎನ್.ಅಂಗಡಗೇರಿ, ಬಸವರಾಜ ಮೇಟಿ, ಶರಣು ದಳವಾಯಿ, ಎಸ್.ಎಲ್.ಓಂಕಾರ, ಸಿದ್ದು ಬಾಗೇವಾಡಿ, ವೈ.ಎನ್.ಮಿಣಜಗಿ, ಶ್ರೀಶೈಲ ಶಿರಗುಪ್ಪಿ, ಬಂದೇನವಾಜ ವಾಲೀಕಾರ, ಬಿ.ಪಿ.ನಾಗಾವಿ, ಸುಭಾಸ ಹಡಪದ, ಕೊಟ್ರೇಶ ಹೆಗ್ಡಾಳ,ಸಿದ್ದಪ್ಪ ಅವಜಿ, ಬಿ.ಬಿ.ಚಿಂಚೋಳ್ಳಿ ಇತರರು ಇದ್ದರು. ಬಿ.ವ್ಹಿ.ಚಕ್ರಮನಿ ಸ್ವಾಗತಿಸಿ, ನಿರೂಪಿಸಿದರು. ಎಚ್.ಬಿ.ಬಾರಿಕಾಯಿ ವಂದಿಸಿದರು.

ಸಮ್ಮೇಳನದ ಸರ್ವಾಧ್ಯಕ್ಷತೆಗೆ ಅರ್ಜಿ ಆಹ್ವಾನ

ಇವಣಗಿ ಗ್ರಾಮದಲ್ಲಿ ನ.೧೩ ರಂದು ಜರುಗುವ ತಾಲೂಕು ೧೦ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನು ಪಾರದರ್ಶಕವಾಗಿ ಆಯ್ಕೆ ಮಾಡುವ ಉದ್ದೇಶದಿಂದ ತಾಲೂಕಿನಲ್ಲಿರುವ ಎಲ್ಲ ಸಾಹಿತಿಗಳಿಂದ, ಕನ್ನಡ ಸಾಹಿತ್ಯಕ್ಕೆ ಕೊಡುಗೆ ನೀಡಿದ ಮಹನೀಯರು ತಮ್ಮ ಪ್ರಕಟಿತ ಪುಸ್ತಕಗಳ ವಿವರ ಮಾಹಿತಿಯೊಂದಿಗೆ ಲಿಖಿತವಾಗಿ ತಮ್ಮ ಆಧಾರ ಕಾರ್ಡ್ ನಕಲು ಪ್ರತಿಯೊಂದಿಗೆ ಅಕ್ಟೋಬರ್ ೧೫ ರೊಳಗೆ ಶಿವಾನಂದ ಡೋಣೂರ, ತಾಲೂಕು ಕಸಾಪ ಅಧ್ಯಕ್ಷರು, ತಾಲೂಕು ೧೦ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಾಲಯ, ಇವಣಗಿ ಈ ವಿಳಾಸಕ್ಕೆ ಕಳುಹಿಸಬೇಕು.
ಹೆಚ್ಚಿನ ವಿವರಗಳಿಗೆ ಮೊ-೯೯೭೨೭೦೭೧೮೫,೯೯೦೦೭೬೨೧೪೬,೯೪೮೧೬೯೬೦೫,೯೭೪೨೬೫೨೦೪೩,೭೮೨೯೪೧೮೬೫೬,೯೯೦೦೯೮೪೮೫೬ ಸಂಖ್ಯೆಗಳಿಗೆ ಸಂಪರ್ಕಿಸಬೇಕೆಂದು ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಡೋಣೂರ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.