ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಉಪನಿರ್ದೇಶಕರ ಕಛೇರಿ (ಆಡಳಿತ) ಶಾಲಾ ಶಿಕ್ಷಣ ಇಲಾಖೆ ವಿಜಯಪುರ ಇವರ ಆಶ್ರಯದಲ್ಲಿ ನಡೆದ ವಿಜಯಪುರ ಜಿಲ್ಲೆ ಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ೨೦೨೪-೨೫ ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದ ಕರಾಟೆ ಸ್ಪರ್ಧೆಯಲ್ಲಿ ಗೀತಾಂಜಲಿ ಮಾದರಿ ಶಾಲೆಯ ವಿದ್ಯಾರ್ಥಿ ಓಂ ಶಶಿಕಾಂತ ಹೊನ್ನಕಾಂಬಳೆ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾನೆ.
ಈ ಪ್ರಶಸ್ತಿಯನ್ನು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಎಸ್.ಲಾಳಸೇರಿ ಅವರು ವಿತರಣೆ ಮಾಡಿದರು.
ಪ್ರಶಸ್ತಿಯನ್ನು ಪಡೆದ ವಿದ್ಯಾರ್ಥಿಯನ್ನು ಶಾಲಾ ಅಧ್ಯಕ್ಷೆ ಶ್ರೀಮತಿ ಮಲ್ಲಮ್ಮ.ಯಾಳವಾರ, ಶಾಲಾ ನಿರ್ದೇಶಕ ಶಿವಾನಂದ ಯಾಳವಾರ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ.ಸುನಂದಾ.ಕೊಂಡಗುಳಿ, ದೈಹಿಕ ಶಿಕ್ಷಕ ಇಸ್ಮಯಿಲ, ಶಾಲಾ ಆಡಳಿತ ಮಂಡಳಿ ಸದಸ್ಯರು ಹಾಗೂ ಶಾಲಾ ಶಿಕ್ಷಕ ಸಿಬ್ಬಂದಿಯವರು ವಿದ್ಯಾರ್ಥಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

