ಉದಯರಶ್ಮಿ ದಿನಪತ್ರಿಕೆ
ಚಿಮ್ಮಡ: ಇಲ್ಲಿನ ಗ್ರಾಮ ಪಂಚಾಯತಿ ಆಶ್ರಯದಲ್ಲಿ ಮಹಾತ್ಮಾ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದುರ ಶಾಸ್ತಿç ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮಹಾತ್ಮಾ ಗಾಂಧಿಜಿ ಹಾಗೂ ಲಾಲ್ ಬಹಾದ್ದುರ ಶಾಸ್ತಿçಯವರ ಭಾವ ಚಿತ್ರಗಳಿಗೆ ಪೂಜೆ ಸಲ್ಲಿಸುವ ಮೂಲಕ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಗ್ರಾಮದ ಪಂಚಾಯತಿ ಹಾಗೂ ಬಸ್ ನಿಒಲ್ದಾಣದ ಆವರಣವನ್ನು ಕಸ ಗುಡಿಸುವ ಮೂಲಕ “ನನ್ನ ನಡಿಗೆ ಸ್ವಚ್ಛತೆಯ ಕಡೆಗೆ” ಘೋಷವಾಕ್ಯದ ಸ್ವಚ್ಛತಾ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆಗೊಳಿಸಲಾಯಿತು.
ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಮಾಲಾ ಆಶೋಕ ಮೋಟಗಿ, ಉಪಾಧ್ಯಕ್ಷೆ ಪ್ರೇಮಾ ಪ್ರಭು ಗೋವಿಂದಗೋಳ, ಗ್ರಾ,ಪಂ. ಅಭಿವೃದ್ದಿ ಅಧಿಕಾರಿ ಶಿವಾನಂದ ಬಿರಾದರ, ಮಾಜಿ ಅಧ್ಯಕ್ಷ ಆನಂದ ಕವಟಿ, ಪ್ರಭು ಮುಧೋಳ, ಅಶೋಕ ಮೋಟಗಿ, ನಾಗಪ್ಪಾ ಆಲಕನೂರ, ಹಾಗೂ ಸಿಬ್ಬಂದಿ ಸಿಆರ್‌ಸಿ ಶ್ರೀಮತಿ ದ್ರಾಕ್ಷಾಯಿಣಿ ಮಂಡಿ, ಎಸ್.ವೈ. ಬಿರಾದರ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಹಲವಾರು ಜನ ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಹಮ್ಮಿಕೊಂಡ ಕ್ವಿಜ್ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

