ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ದಿನನಿತ್ಯ ಕನಿಷ್ಠ ೩೦ ನಿಮಿಷ ಬಿರುಸಿನ ನಡಿಗೆ, ನಿಯಮಿತವಾಗಿ ವ್ಯಾಯಾಮ, ೨೦ ನಿಮಿಷ ಈಜು, ನಿಯಮಿತ ಯೋಗಾಭ್ಯಾಸ ಸೇರಿದಂತೆ ಉತ್ತಮ ಅಭ್ಯಾಸ ರೂಢಿಸಿಕೊಳ್ಳುವ ಮೂಲಕ ಕ್ರೀಯಾಶೀಲರಾಗಿರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ ಎನ್.ಸಿ.ಡಿ.ಘಟಕ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಜಿಲ್ಲಾ ಶಾಖೆ ಡಾ|| ಬಿದರಿಯವರ ಅಶ್ವಿನಿ ಆಸ್ಪತ್ರೆ ಹಾಗೂ ಅಶ್ವಿನಿ ಇನ್ಸಿಟ್ಯೂಟ್ ವಿವಿದ ನರ್ಸಿಂಗ್ ಕಾಲೇಜಗಳು ಇವರ ಸಹಯೋಗದಲ್ಲಿ ಗುರುವಾರ ವಿಶ್ವ ಹೃದಯ ದಿನಾಚರಣೆ ಮತ್ತು ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಸಂಪತ್ತ ಗುಣಾರಿ, ಜಿಲ್ಲಾ ಕಾರಾಗೃಹ ಅಧಿಕ್ಷಕರಾದ ಡಾ. ಐ.ಜೆ ಮ್ಯಾಗೇರಿ ಮತ್ತು ಅಶ್ವಿನಿ ಆಸ್ಪತ್ರೆಯ ಮುಖ್ಯಸ್ಥ ಚಿಕ್ಕಮಕ್ಕಳ ತಜ್ಞ ಡಾ.ಎಲ್.ಎಚ್.ಬಿದರಿಯವರು ಜಂಟಿಯಾಗಿ ಹಸಿರು ನಿಶಾನೆ ತೋರಿಸುವ ಮೂಲಕ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಅಶ್ವಿನಿ ಆಸ್ಪತ್ರೆಯ ಮುಖ್ಯಸ್ಥ ಚಿಕ್ಕಮಕ್ಕಳ ತಜ್ಞ ಡಾ|| ಎಲ್.ಎಚ್ ಬಿದರಿ ಅವರು ಮಾತನಾಡಿ, ಧೂಮಪಾನ ಮಾಡುವುದರಿಂದ ರಕ್ತದಲ್ಲಿ ಕೊಬ್ಬಿನಾಂಶ ಹೆಪ್ಪುಗಟ್ಟಿ ರಕ್ತನಾಳಗಳನ್ನು ಕುಗ್ಗಿಸುತ್ತದೆ, ನಿಯಮಿತ ವ್ಯಾಯಾಮದಿಂದ ಹೃದಯಾಘಾತವನ್ನು ತಡೆಗಟ್ಟಿಬಹುದು. ಕಾಫಿ-ಚಹಾ ಸೇವನೆ ಮಿತವಾಗಿರಲಿ. ಸಕ್ಕರೆ ಕಾಯಿಲೆಗೆ ನಿಯಮಿತವಾಗಿ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.
ಆರೋಗ್ಯ ಧಾಮ ಆಸ್ಪತ್ರೆ ಕಾರ್ಡಿಯಾಲಾಜಿಸ್ಟ್ ಡಾ.ಗೌತಮ ವಗ್ಗರ ಅವರು, ಹೃದಯದ ಕಾಳಜಿ ಹಾಗೂ ತಡೆಗಟ್ಟುವಿಕೆ ಕುರಿತು ಉಪನ್ಯಾಸವನ್ನು ನೀಡಿದರು.
ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಅಪ್ಪಾಸಾಹೆಬ ಆರ್ ಇನಾಮದಾರ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಎಮ್ ಬಿ ಬಿರಾದಾರ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಜಾನ್ ಕಟವಟೆ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಕೆ ಡಿ ಗುಂಡಬಾವಡಿ, ತಾಲೂಕಾ ಆರೋಗ್ಯಾಧಿಕಾರಿ ಡಾ.ಪರಸುರಾಮ ಹಿಟ್ಟನಳ್ಳಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ ಎಮ್ ಕೋಲೂರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್ ಆರ್ ಬಾಗವಾನ, ಡಾ.ಸುರೆಶ ಪಾಸ್ಚಾಪುರ ಜಿಲ್ಲಾ ಎಪಿಡಮಾಲಾಜಿಸ್ಟ್ ಮತ್ತು ಜಿಲ್ಲಾ ಎನ್.ಸಿ.ಡಿ ಘಟಕದ ಡಾ. ಪ್ರೀಯದರ್ಶಿನಿ ಕೆಂಚರಡ್ಡಿ, ಶ್ರೀಕಾಂತ ಪೂಜಾರಿ, ಅಶ್ವಿನಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದ, ಜಿಲ್ಲಾ ಎನ್.ಸಿ.ಡಿ ಘಟಕದ ಸಿಬ್ಬಂದಿ, ನಗರ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಇತರರು ಉಪಸ್ಥಿತರಿದ್ದರು.
” ನಿಯಮಿತ ಯೋಗಾಭ್ಯಾಸದಿಂದ ಮಾನಸಿಕ ಒತ್ತಡ ಹಾಗೂ ಉದ್ವೇಗ ನಿಯಂತ್ರಿಸಬಹುದು. ವರ್ಷಕ್ಕೊಮ್ಮೆ ಹೃದಯ ಪರೀಕ್ಷೆ ಮಾಡಿಸಿಕೊಳ್ಳಬೇಕು. ರಕ್ತದೊತ್ತಡವನ್ನು ನಿಯಮಿತವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಹೃದಯದ ಬಗ್ಗೆ ಸದಾ ಕಾಳಜಿವಹಿಸಬೇಕು.”
– ಡಾ.ಸಂಪತ್ ಗುಣಾರಿ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ

