Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಕ್ಕಮಹಾದೇವಿ ಮಹಿಳಾ ವಿವಿ: ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಅಕ್ಕಮಹಾದೇವಿ ಮಹಿಳಾ ವಿವಿ: ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ೨೦೨೪-೨೫ನೆಯ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ (ಎಂಎ), ವ್ಯಾಲ್ಯು ಆಡೆಡ್ ಡಿಪ್ಲೋಮಾ ಹಾಗೂ ವ್ಯಾಲ್ಯು ಆಡೆಡ್ ಅಡ್ವಾನ್ಸ್ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳ ಪ್ರಥಮ ವರ್ಷದ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಯುಯುಸಿಎಂಎಸ್ ತಂತ್ರ‍್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಸ್ನಾತಕ ಪದವಿಯ ೬ನೆಯ ಸೆಮಿಸ್ಟರ್ ಪರೀಕ್ಷಾ ಫಲಿತಾಂಶಕ್ಕಾಗಿ ಕಾಯುವ ಅಗತ್ಯವಿಲ್ಲ. ಐದು ಸೆಮಿಸ್ಟರ್‌ಗಳ ಅಂಕಪಟ್ಟಿಯೊಂದಿಗೆ ಈಗಲೇ ಅರ್ಜಿ ಸಲ್ಲಿಸಿ. ಪರೀಕ್ಷಾ ಫಲಿತಾಂಶ ಬಂದ ನಂತರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಆಯಾ ವಿಭಾಗಗಳಿಗೆ ೬ನೆಯ ಸೆಮಿಸ್ಟರ್ ಅಂಕಪಟ್ಟಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ ೨೦ ಕೊನೆಯ ದಿನವಾಗಿದ್ದು ಯುಯುಸಿಎಂಎಸ್ https://uucms.karnataka.gov.in/Login/Index ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯ ಪ್ರತಿಯನ್ನು ಪತ್ರಿಕೋದ್ಯಮದ ವಿಭಾಗದ ಕಚೇರಿ ಅಥವಾ ವಿಶ್ವವಿದ್ಯಾನಿಲಯದ ಕಚೇರಿಗೆ ಅಕ್ಟೋಬರ್ ೨೧ರೊಳಗೆ ಸಲ್ಲಿಸಬೇಕು. ವಿದ್ಯಾರ್ಥಿನಿಯರ ಆಯ್ಕೆಯನ್ನು ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ಮಾಡಲಾಗುವುದು. ಆಪ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಪ್ರವೇಶಾತಿಯನ್ನು ಕೌನ್ಸೆಲಿಂಗ್ ಮೂಲಕ ನೀಡಲಾಗುವುದು ಮತ್ತು ಕೌನ್ಸೆಲಿಂಗ್ ದಿನಾಂಕವನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
ಇಡೀ ರಾಜ್ಯದ ವ್ಯಾಪ್ತಿಯನ್ನು ಹೊಂದಿರುವ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆಯಲು ರಾಜ್ಯದ ಯಾವುದೇ ವಿಶ್ವವಿದ್ಯಾಲಯದ ವ್ಯಾಪ್ತಿಯ ಕಾಲೇಜುಗಳಲ್ಲಿ ಪದವಿ (ಬಿ.ಎ., ಬಿಎಸ್ಸಿ, ಬಿ.ಕಾಂ) ಪಡೆದಿರುವ ವಿದ್ಯಾರ್ಥಿನಿಯರು ಅರ್ಹರು.
ಎರಡು ವರ್ಷಗಳ ಎಂ.ಎ.ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಕೋರ್ಸ್ ಮುಗಿಸಿ ಹೊರ ಬರುವ ವಿದ್ಯಾರ್ಥಿನಿಯರಿಗೆ ಉದ್ಯೋಗಾವಕಾಶಗಳು ವಿಪುಲವಾಗಿವೆ. ಪತ್ರಿಕೆಗಳು, ಟಿ.ವಿ, ರೇಡಿಯೋ, ಕಾರ್ಪೋರೇಟ್ ವಲಯ, ಜಾಹಿರಾತು ಕ್ಷೇತ್ರ, ರಾಜ್ಯ ಹಾಗೂ ಕೇಂದ್ರ ಸರಕಾರಗಳ ವಿವಿಧ ಇಲಾಖೆಗಳಲ್ಲಿ ನೌಕರಿಗಳಿಗೆ ಅರ್ಹರಾಗುತ್ತಾರೆ. ವಿದ್ಯಾರ್ಥಿನಿಯರನ್ನು ವಿಶೇಷವಾಗಿ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ತರಬೇತಿಗೊಳಿಸುವ ಉದ್ದೇಶದಿಂದ ವಿಶ್ವವಿದ್ಯಾಲಯದ ಪತ್ರ‍್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತ ಆಡಿಯೋ-ವಿಡಿಯೋ ಪ್ರೊಡಕ್ಷನ್ ಸ್ಟುಡಿಯೋ ಸ್ಥಾಪಿಸಲಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಈ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿನಿಯರಿಗೆ ಸರ್ಕಾರಿ ಶಿಷ್ಯವೇತನ, ಹಾಸ್ಟೆಲ್ ಸೌಲಭ್ಯ, ಸುಸಜ್ಜಿತ ಗ್ರಂಥಾಲಯ, ಮಲ್ಟಿಮೀಡಿಯಾ ಪ್ರಯೋಗಾಲಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರಿಗೆ ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ (ಸರ್ಕಾರದಿಂದ ಶುಲ್ಕ ಮರುಪಾವತಿಯಾದ ನಂತರ ಆ ಮೊತ್ತವನ್ನು ವಿವಿಗೆ ಜಮಾ ಮಾಡಬೇಕು). ಅಲ್ಲದೇ ಉಚಿತ ಲ್ಯಾಪ್‌ಟಾಪ್ ನೀಡಲಾಗುವುದು. ಹೆಚ್ಚಿನ ವಿವರಗಳಿಗಾಗಿ ಮುಖ್ಯಸ್ಥರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಅವರನ್ನು ಖುದ್ದಾಗಿ ಇಲ್ಲವೇ ದೂರವಾಣಿ ಸಂಖ್ಯೆ: ೯೪೪೯೧೮೨೦೯೧, ೯೪೮೨೨೪೮೩೭೨ ಮತ್ತು ೯೮೪೪೬೮೧೩೯೮ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.