ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯದ ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಬಿ.ಝಡ್ ಜಮೀರ ಅಹ್ಮದ್ ಖಾನ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ ೭ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ವಕ್ಫ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಅದಾಲತ್‌ನಲ್ಲಿ ಕರ್ನಾಟಕ ರಾಜ್ಯ ಔಕಾಫ್ ಮಂಡಳಿ ಅಧ್ಯಕ್ಷರಾದ ಅನ್ವರ ಬಾಷಾ ಕೆ ಅವರು ಉಪಸ್ಥಿತರಿರಲಿದ್ದಾರೆ.
ಆದ್ದರಿಂದ, ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಯ ಮುತವಲ್ಲಿ, ಮುಖ್ಯಸ್ಥರು, ಪದಾಧಿಕಾರಿಗಳು ಹಾಗೂ ಆಡಳಿತಾಧಿಕಾರಿಗಳು ವಕ್ಫ್ ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಕುಂದುಕೊರತೆಗಳ ಪರಿಹಾರಕ್ಕಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ವಕ್ಫ್ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
