ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಜಿಗಜೇವಣಗಿ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಿದ್ದು, ಇದನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ವತಿಯಿಂದ ಜಿಲ್ಲಾಧಿಕಾರಿಗಳು, ವಿಜಯಪುರ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿ.ಪಂ. ವಿಜಯಪುರ ಇವರ ಮುಖಾಂತರ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ಇವರಿಗೆ ಮನವಿ ಸಲ್ಲಿಸಲಾಯಿತು.
ಜಿಗಜೇವಣಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಮಾರು ನಾಲ್ಕು ಗ್ರಾಮಗಳು ಇದ್ದು, ಆದರೆ ಈ ನಾಲ್ಕು ಗ್ರಾಮಗಳಲ್ಲಿ ಯಾವುದೇ ಮೂಲ ಸೌಲಭ್ಯಗಳನ್ನು ಕಲ್ಪಿಸದೇ ಈಗ ಗಾಂಧಿ ಗ್ರಾಮ ಪುರಸ್ಕಾರ ನೀಡಿದ್ದು ನಾಚಿಕೆಗೇಡಿನ ಸಂಗತಿಯಾಗಿದೆ. ಸದರಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳಲ್ಲಿ ಸುಮಾರು ೩೦೦ ಕಾಮಗಾರಿಗಳನ್ನು ಮಾಡಲಾಗಿದೆ ಎಂದು ತೋರಿಸುವ ಜಿಲ್ಲಾಡಳಿತ ಇದರಲ್ಲಿ ೩೦ ಕಾಮಗಾರಿಗಳು ಸರಿಯಾದ ಪ್ರಮಾಣದಲ್ಲಿ ಆಗಿರುವದಿಲ್ಲ. ಸುಖಾ ಸುಮ್ಮನೆ ಮೂಲಭೂತ ಸೌಲಭ್ಯಗಳು ನೀಡಲಾಗಿದೆ ಎಂದು ಹೇಳಿ ಅಭಿವೃದ್ದಿಗೆ ಕಾಮಗಾರಿಗಳಿಗೆ ಕುಂಠಿತವನ್ನುಂಟು ಮಾಡಿದ್ದಾರೆ. ಅಧಿಕಾರಿಗಳು ಸರಕಾರಕ್ಕೆ ಸುಳ್ಳು ಮಾಹಿತಿ ಹೇಳಿ ಈ ರೀತಿಯ ಪುರಸ್ಕಾರಕ್ಕೆ ಭಾಜನಗೊಳಿಸಲಾಗಿದೆ. ಆದ್ದರಿಂದ ಗಾಂಧಿ ಗ್ರಾಮ ಪುರಸ್ಕಾರವನ್ನು ಹಿಂಪಡೆದು ಪಂಚಾಯತ ವ್ಯಾಪ್ತಿಯ ಗ್ರಾಮಗಳಲ್ಲಿ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ಹಮೀದ ಎಸ್. ಇನಾಮದಾರ, ವಿಕ್ರಮ ವಾಘಮಾರೆ, ದುರ್ಗಪ್ಪ ಬೂದಿಹಾಳ, ಸೀನು ಹಿಪ್ಪರಗಿ, ಭಾಷಾ ಕಲಕೇರಿ ಇನ್ನಿತರರು ಉಪಸ್ಥಿತರಿದ್ದರು.

