ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ನೌಕರಿ ಕೊಡಿಸುವುದಾಗಿ ಅನಾಮಿಕ ವ್ಯಕ್ತಿಗಳು ಸುಳ್ಳು ಸುದ್ದಿಗಳನ್ನು ಹರಡಿಸುತ್ತಿದ್ದಾರೆ. ಆದರೆ, ಇದುವರೆಗೆ ಬೋಧಕೇತರ ಸಿಬ್ಬಂದಿಗಳ ನೇಮಕಾತಿಗೆ ಸಂಬಂಧಿಸಿದ ಯಾವುದೇ ಅಧಿಸೂಚನೆ ಹೊರಡಿಸಿರುವುದಿಲ್ಲ ಹಾಗೂ ನೇಮಕಾತಿ ಪ್ರಕ್ರಿಯೆ ಆರಂಭಿಸಿಲ್ಲ ಎಂದು ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದ್ದಾರೆ.
ಈ ಸಂಬಂಧ ಇಂದು ಇಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನೇಮಕಾತಿ ಮಾಡಿಸುವುದಾಗಿ ಯಾರಾದರೂ ಹೇಳುತ್ತಿದ್ದಲ್ಲಿ ಅಂಥವರ ಹೆಸರನ್ನು ವಿಶ್ವವಿದ್ಯಾನಿಲಯದ ಗಮನಕ್ಕೆ ತರುವುದು ಮತ್ತು ಸಮೀಪದ ಪೊಲೀಸ್ ಠಾಣೆಗಳನ್ನು ಸಂಪರ್ಕಿಸಬಹುದಾಗಿದೆ. ಯಾರಾದರೂ ಇಂತಹ ಮೋಸದ ಜಾಲಕ್ಕೆ ಸಿಲುಕಿದ್ದರೆ ಅದಕ್ಕೆ ವಿಶ್ವವಿದ್ಯಾನಿಲಯವು ಹೊಣೆಯಾಗಿರುವುದಿಲ್ಲವೆಂದು ಈ ಮೂಲಕ ಸಾರ್ವಜನಿಕರ ಗಮನಕ್ಕೆ ತರಲಾಗಿದೆ ಎಂದು ಅವರು ತಿಳಿಸಿದ್ದಾರೆ

