ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಸೋಮಜ್ಯಾಳ ಗ್ರಾಮಸ್ಥರಲ್ಲಿ ಭಯದ ವಾತವರಣ ಸೃಷ್ಠಿ ಮಾಡಿದ್ದ ಚಿರತೆಯನ್ನು ಸಿಂದಗಿ ತಾಲೂಕು ಅರಣ್ಯ ಇಲಾಖೆಯ ಸಿಬ್ಬಂದಿಗಳು ಸೆರೆ ಹಿಡಿಯುವ ಮೂಲಕ ಜನರಲ್ಲಿದ್ದ ಭಯವನ್ನು ಹುಟ್ಟಿಸಿದ್ದ ಚಿರತೆಯನ್ನು ಸೆರೆ ಹಿಡಿದು ಜನರನ್ನು ನಿರಾಳವಾಗುವಂತೆ ಮಾಡಿದ್ದಾರೆ.
ವಿಜಯಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭಾಗ್ಯವಂತ ಮಸೂದಿ ಅವರ ಮಾರ್ಗದರ್ಶನದಲ್ಲಿ ಸಿಂದಗಿಯ ಪ್ರಾದೇಶಿಕ ಅರಣ್ಯ ವಲಯಾಧಿಕಾರಿ ರಾಜೀವ ಬಿರಾದಾರ ಅವರ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ಪ್ರಿಯಾಂಕ ನಗರ, ಎಸ್.ಎಸ್. ಬಿರಾದಾರ, ಸಿಬ್ಬಂದಿಗಳಾದ ವಿಠ್ಠಲ ಚನ್ನೂರ, ಶಿವಾನಂದ ಮದಗೊಂಡ, ಮುತ್ತಪ್ಪ ಕಂಟಿಕರ, ಬೀರೇಶ ರಾಜೋಳಿ ಹಾಗೂ ಗುರು ರಾಮಗಿಮಠ ಸಿಬ್ಬಂದಿಗಳ ಕಾರ್ಯಾಚರಣೆಯ ತಂಡ ಚಿರತೆಯನ್ನು ಸೆರೆ ಹಿಡಿದಿದೆ.
ಈ ಕಾರ್ಯಕ್ಕೆ ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಂದಗಿ ತಾಲೂಕಿನಲ್ಲಿ ಚಿರತೆಯ ಹಾವಳಿ ಹೆಚ್ಚಿದೆ. ಊರಲ್ಲಿ ಬಂದು ಸೇರಿಕೊಂಡಿದೆ ಎಂದು ಹರಿದಾಡುತ್ತಿತ್ತು. ಗ್ರಾಮಸ್ಥರ ಸಹಕಾರದಿಂದ ಸುತ್ತಮುತ್ತ ಕಂಡು ಬಂದ ಚಿರತೆಯನ್ನು ೨೪ ಗಂಟೆಯಲ್ಲಿ ಬೋನಿಗೆ ಇರಿಸಿ ಸೆರೆ ಹಿಡಿಯಲಾಯಿತು. ಇದನ್ನು ಬೆಳಗಾವಿಯ ಕಿತ್ತೂರ ರಾಣಿ ಚನ್ನಮ್ಮ ಮೃಗಾಲಯಕ್ಕೆ ತೆಗೆದುಕೊಂಡು ಹೋಗಿ ಬಿಡಲಾಗುತ್ತಿದೆ ಎಂದು ಸಿಂದಗಿ ವಲಯ ಅರಣ್ಯಾಧಿಕಾರಿ ರಾಜೀವ ಬಿರಾದಾರ ’ಉದಯರಶ್ಮಿ’ ಪತ್ರಿಕೆಗೆ ತಿಳಿಸಿದ್ದಾರೆ.

