ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪ್ರಸಕ್ತ ೨೦೨೪-೨೫ಜನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ-ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು https://swdservice.karnataka.gov.in/ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು https://twd.karnataka.gov.in/index.aspxವೆಬ್‌ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಇಲಾಖೆ ವೆಬ್‌ಸೈಟ್, ಜಿಲ್ಲಾ, ತಾಲೂಕಾ ಮಟ್ಟದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
