ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ಬಬಲೇಶ್ವರ, ತಿಕೋಟಾ ಹಾಗೂ ದೇವರಹಿಪ್ಪರಗಿ ತಾಲೂಕಿನ ರೈತರಿಗೆ ಅಕ್ಟೋಬರ್ ೧೫, ೧೬ ಹಾಗೂ ೧೮ ರಂದು ಕ್ರಮವಾಗಿ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವಿಜಯಪುರದಲ್ಲಿ ವಿವಿಧ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ಘಟಕಗಳ ಉಪಯೋಗಗಳು, ಅಳವಡಿಕೆ ಮತ್ತು ನಿರ್ವಹಣೆ ವಿಷಯದ ಕುರಿತು ತರಬೇತಿ ಆಯೋಜಿಸಲಾಗಿದೆ.
ಆಸಕ್ತ ರೈತರು ತರಬೇತಿಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
