ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯಿಂದ ಮೇಷನ್ ಕಿಟ್, ರೋಡ ನಿರ್ಮಾಣ ಕಿಟ್ ಹಾಗೂ ಟೈಲ್ಸ್ ಲೇಯರ್ ಟೂಲ್ ಕಿಟ್‌ಗಳನ್ನು ವಿತರಿಸಲಾಗುತ್ತಿದ್ದು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹರು ಅಕ್ಟೋಬರ್ ೭ ರಿಂದ ೧೬ರೊಳಗೆ ಅರ್ಜಿಯನ್ನು ಕಾರ್ಮಿಕ ನಿರೀಕ್ಷಕರ ಕಚೇರಿ ೧ನೇ ವೃತ್ತ ಮತ್ತು ಕಾರ್ಮಿಕ ನಿರೀಕ್ಷಕರ ಕಚೇರಿ ೨ನೇ ವೃತ್ತ, ವಿಜಯಪುರ ಕಲ್ಯಾಣ ಸಮುದಾಯ ಭವನ, ಸಿಂದಗಿ ನಾಕಾ, ಅಲ್ಲಾಪೂರ ಓಣಿ, ವಿಜಯಪುರ ಕಚೇರಿಗೆ ಸಲ್ಲಿಸುವಂತೆ ಕಾರ್ಮಿಕ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
