Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನಕಲಾ ಸಾಂಸ್ಕೃತಿಕ ಮೇಳಕ್ಕೆ ಕ್ಷಣಗಣನೆ
(ರಾಜ್ಯ ) ಜಿಲ್ಲೆ

ಜನಕಲಾ ಸಾಂಸ್ಕೃತಿಕ ಮೇಳಕ್ಕೆ ಕ್ಷಣಗಣನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮೇ ಸಾಹಿತ್ಯ ಬಳಗ, ಲಡಾಯಿ ಪ್ರಕಾಶನ, ಕವಿ ಪ್ರಕಾಶನ ಮತ್ತು ಚಿತ್ತಾರ ಕಲಾಬಳಗ ಆಶ್ರಯದಲ್ಲಿ ಅಕ್ಟೋಬರ್ 6ರಂದು ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿರುವ “ಜನಕಲಾ ಸಾಂಸ್ಜೃತಿಕ ಮೇಳಕ್ಕೆ ಕ್ಷಣಗಣನೆ ಆರಂಭವಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಮೊಟ್ಡಮೊದಲ ಬಾರಿಗೆ ಹೋರಾಟದ ಹಾಡುಗಳ ಮೂಲಕ ಸಮಾಜದಲ್ಲಿ ವೈಚಾರಿಕ ಜಾಗೃತಿ ಮೂಡಿಸುತ್ತಿರುವ ಪ್ರಜಾ ಗಾಯಕರ ಸಮಾಗಮವಾಗಲಿದೆ.
ಅಕ್ಟೋಬರ್ 6ರಂದು ಮುಂಜಾನೆ 10-30 ಗಂಟೆಗೆ ಮೇ ಕಲಾ ಮಂಡಳಿಯಿಂದ ಹೋರಾಟದ ಹಾಡಿನ ಮೂಲಕ ಪ್ರಾರಂಭಗೊಳ್ಳುವ ಮೇಳವನ್ನು ಮದುವೆ, ಸೋಬಾನೆ, ನಾಮಕರಣ ಮುಂತಾದ ಸಂದರ್ಭಗಳಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಎದೆಯೊಳಗಿಟ್ಟುಕೊಂಡು, ತಾವೇ ಹಾಡು ಕಟ್ಟಿ, ಹಲವು ದಶಕಗಳಿಂದ ಹಾಡುತ್ತ ಬರುತ್ತಿರುವ ಹಿರಿಯ ಜೀವಗಳಾದ ಬಸಮ್ಮ ಪೀರಪ್ಪ ನಡುವಿನಮನಿ, ಆದಮ್ಮ ಚಂದಪ್ಪ ಕದ್ರಿ, ಸಾವಿತ್ರಿಬಾಯಿ ನಿಡೋಣಿ, ರಮಾಬಾಯಿ ಸಂಗಪ್ಪ ಬೆಳ್ಳೆನವರ, ಪದ್ಮಾವತಿ ಸಂಗಪ್ಪ‌ ವಾಘಮೋರೆ ಅವರು ತಮ್ಮ ಹಾಡುಗಳ ಮೂಲಕ ಉದ್ಘಾಟಿಸಲಿದ್ದಾರೆ.
ಖ್ಯಾತ ಜನಪರ ಗಾಯಕರಾದ ಜನಾರ್ಧನ (ಜೆನ್ನಿ) ಮೈಸೂರು, ಲಕ್ಷ್ಮಿಪತಿ ಕೋಲಾರ ದಿಕ್ಸೂಚಿ‌ ಮಾತುಗಳನ್ನಾಡಲಿದ್ದಾರೆ. ಬೇರು-ಬೆವರು ಕಲಾ ಬಳಗ, ಚಿಂತಾಮಣಿ, ದಲಿತ ಕಲಾ ಮಂಡಳಿ ಗದಗ, ಹರ್ಲಾಪುರ ಧಾರವಾಡದ ಯುವಜನ ಹಾಗೂ ಸಾಂಸ್ಕೃತಿಕ ಅಭಿವೃದ್ಧಿ ಕೇಂದ್ರದ ಕಲಾತಂಡ, ಕೊಪ್ಪಳದ ಧರಣಿ ಸಾಂಸ್ಕೃತಿಕ ಕಲಾಬಳಗ, ಸಿಂಧನೂರಿನ ಕ್ರಾಂತಿಕಾರಿ ಸಾಂಸ್ಕೃತಿಕ ಸಂಘ, ಕೊತಬಾಳದ ಅರುಣೋದಯ ಕಲಾ ಬಳಗದ ಸದಸ್ಯರು ಇಡೀ ದಿನ ತಮ್ಮ‌ ಕ್ರಾಂತಿಗೀತೆಗಳ ಮೂಲಕ ಹೋರಾಟದ ಕಿಚ್ಚನ್ನು ಹಚ್ಚಲಿದ್ದಾರೆ.
ಜೊತೆಗೆ ಮೈಸೂರು ಮೈಸೂರು ನಿರ್ದಿಗಂತ ಪ್ರಸ್ತುತಿಯ ” ಸಮತೆಯ ಸೊಲ್ಲುಗಳು”, ಹಿರಿಯ ಭಜನಾ ಪದಕಾರರಾದ ಲಕ್ಷ್ಮಣ ಗೊಣಸಗಿ ತಂಡವು ಭಜನಾ ಮತ್ತು ಜಮಖಂಡಿಯ ಸರಸ್ವತಿ ಸಬರದ ಅವರು ವಚನ-ಗಾಯನ ನಡೆಯಲಿದೆ.
ಸಂಜೆ 7 ಗಂಟೆಗೆ ವಿಕ್ರಮ ವಿಸಾಜಿ ರಚಿಸಿದ, ಪ್ರವೀಣರೆಡ್ಡಿ ನಿರ್ದೇಶಿಸಿರುವ, ಕೋಮುವಾದಿ ಹಂತಕರ ಗುಂಡಿಗೆ ಬಲಿಯಾದ ಡಾ. ಎಂ.ಎಂ. ಕಲಬುರ್ಗಿಯವರ ಜೀವನಾಧಾರಿತ ನಾಟಕ “ರಕ್ತವಿಲಾಪ” ಪ್ರದರ್ಶನಗೊಳ್ಳಲಿದೆ.
ವಿವಿಧ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಮೇಳಕ್ಕೆ ಸಹಯೋಗ ನೀಡಿದ್ದು, ಸಮತಾ ಸಮಾಜದ ಕನಸು ಕಾಣುತ್ತಿರುವ ಮನಸುಗಳು ಜೊತೆಗಿವೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.