ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದ ಮಾರುತಿ ನಗರದ ಪದ್ಮಾ ಕೊಂತಿಕಲ್ಲ ಕಾಣೆಯಾದ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲತಃ ಬಿದರಕುಂದಿ ಗ್ರಾಮದ ನಿವಾಸಿಯಾಗಿದ್ದ ಇವರು ಪಟ್ಟಣದ ಮಾರುತಿ ನಗರದಲ್ಲಿ ವಾಸವಾಗಿದ್ದರು. ಅ೩ ರಂದು ಮಧ್ಯಾಹ್ನ ೧ಗಂಟೆಗೆ ಬಯಲು ಶೌಚಕ್ಕೆ ಹೋಗಿ ಬರುವದಾಗಿ ಹೇಳಿ ಹೋದವಳು ಮರಳಿ ಮನೆಗೆ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿರುತ್ತಾಳೆ ಎಂದು ಪದ್ಮಾಳ ತಾಯಿ ಪಾರ್ವತಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
