Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡೋಣಿ ನದಿ ಪ್ರವಾಹ ತಡೆಗೆ ಅಗತ್ಯ ಕ್ರಮ :ಡಿಸಿ ಟಿ.ಭೂಬಾಲನ್
(ರಾಜ್ಯ ) ಜಿಲ್ಲೆ

ಡೋಣಿ ನದಿ ಪ್ರವಾಹ ತಡೆಗೆ ಅಗತ್ಯ ಕ್ರಮ :ಡಿಸಿ ಟಿ.ಭೂಬಾಲನ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರವಾಹ ತಡೆಗೆ ಪ್ರಾಥಮಿಕ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಕ್ರೀಯಾಯೋಜನೆ ಸಿದ್ಧಪಡಿಸಲು ಡಿಸಿ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಡೋಣಿ ನದಿಯಿಂದ ಉಂಟಾಗುವ ಪ್ರವಾಹ ಪರಿಸ್ಥಿತಿಯನ್ನು ತಡೆಯಲು ತಾತ್ಕಾಲಿಕವಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಕ್ತ ಕ್ರೀಯಾಯೋಜನೆಯನ್ನು ಸಿದ್ಧಪಡಿಸುವಂತೆ ಸಂಬಂಧಿಸಿದ ಆಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.
ವಿಜಯಪುರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಪ್ರವಾಹ ನಿಯಂತ್ರಣ ಯೋಜನೆ ರೂಪಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಸಂಜೆ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು.
ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಗಳಲ್ಲಿ ಹೂಳು ತುಂಬಿಕೊಂಡು ಸೇತುವೆಯ ಎತ್ತರ ಕಡಿಮೆಯಾಗಿ ನೀರಿನ ಶೇಖರಣೆ ಸಾಧ್ಯವಾಗದೇ ಇರುವುದರಿಂದ ನದಿಯಲ್ಲಿ ಹರಿಯುವ ನೀರಿನ ಒತ್ತಡ ಹೆಚ್ಚಾಗಿ ನೀರು ತನ್ನ ಪಥ ಬದಲಿಸಿ ಸುತ್ತಮುತ್ತಲಿನ ಜಮೀನುಗಳಿಗೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗಲಿರುವುದರಿಂದ ಡೋಣಿಗೆ ಸೇರುವ ಕಾಲುವೆಗಳನ್ನು ಪರಿಶೀಲನೆ ಹಾಗೂ ಡೋಣಿ ವ್ಯಾಪ್ತಿಯ ವಿವಿಧೆಡೆ ಚೆಕ್ ಡ್ಯಾಂ ನಿರ್ಮಾಣಕ್ಕೆ ಇರುವ ಅವಕಾಶ ಮತ್ತು ಡೋಣಿ ನದಿಯಿಂದ ಬೇರೆ ಕಾಲುವೆ, ಕೆರೆ-ಕಟ್ಟೆಗಳಿಗೆ ನೀರನ್ನು ಹರಿಸುವ ಸಾಧ್ಯಸಾಧ್ಯತೆ ಕುರಿತು ಪರಿಶೀಲನೆ ನಡೆಸಬೇಕು. ಡೋಣಿ ನದಿಯಲ್ಲಿ ತುಂಬಿರುವ ಹೂಳಿ ಪ್ರಮಾಣದ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಕೆಬಿಜೆಎನ್‌ಎಲ್ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಡೋಣಿ ನದಿಯಲ್ಲಿ ಹೂಳು ತುಂಬಿ, ಜಾಲಿ ಕಂಟಿಗಳು ಬೆಳೆದು ನೀರು ಸರಾಗವಾಗಿ ಹರಿಯದೇ ಒಂದೇ ಕಡೆ ನೀರು ಜಮಾವಣೆಯಾಗಿ, ಪ್ರವಾಹ ಪರಿಸ್ಥಿತಿ ಉಂಟಾಗುವ ಕುರಿತು ರೈತರಿಗೆ ಸೂಕ್ತ ತಿಳುವಳಿಕೆ ಮೂಡಿಸಬೇಕು. ಹರನಾಳ, ಸಾರವಾಡ, ಎನ್.ಎಚ್.೨೧೮ ಹೊನಗನಹಳ್ಳಿ, ಹಿಟ್ನಳ್ಳಿ ಡೋಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಜ್‌ಗಳ ಪ್ರದೇಶದಲ್ಲಿ ಸರ್ವೇ ಕಾರ್ಯ ಕೈಗೊಳ್ಳಬೇಕು. ಸರ್ವೇ ಕಾರ್ಯ ಪೂರ್ಣಗೊಳಿಸಿದ ನಂತರ ಅವಶ್ಯಕತೆ ಇದ್ದಲ್ಲಿ ಈ ಪ್ರದೇಶದಲ್ಲಿ ಪ್ರಾಯೋಗಿಕವಾಗಿ ೧೫೦ ಮೀ. ಹೂಳು ತೆಗೆಯುವುದು, ಜಾಲಿ ಕಂಟಿಗಳನ್ನು ತೆರವುಗೊಳಿಸುವ ಕುರಿತಂತೆ ತಗಲುವ ವೆಚ್ಚ ಸೇರಿದಂತೆ ಮುಂಚಿತವಾಗಿಯೇ ಸೂಕ್ತ ಕ್ರೀಯಾಯೋಜನೆ ಸಿದ್ಧಪಡಿಸಿ ಸಲ್ಲಿಸಬೇಕು. ಯಾವುದೇ ಸಮಸ್ಯೆ ಎದುರಾದರೂ ಕೈಗೊಳ್ಳಬಹುದಾದ ಪರಿಹಾರ ಕುರಿತು ಮುಂಚಿತವಾಗಿಯೇ ಸಿದ್ಧತೆ ಮಾಡಿಟ್ಟುಕೊಳ್ಳುವಂತೆ ಅವರು ಸೂಚನೆ ನೀಡಿದರು.
ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕಾಗಿ ವಿವಿಧ ಇಲಾಖೆಗಳನ್ನೊಳಗೊಂಡ ಸಮಿತಿಯೊಂದನ್ನು ರಚಿಸಿಕೊಂಡು ಸಮಿತಿಯ ಸಲಹೆ ಮೇರೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ನರೇಗಾ ಯೋಜನೆಯಡಿ ಹರನಾಳ, ಸಾರವಾಡ, ಎನ್.ಎಚ್.೨೧೮ ಹೊನಗನಹಳ್ಳಿ, ಹಿಟ್ನಳ್ಳಿ ಡೋಣಿ ನದಿಯ ಹೂಳು ತೆಗೆಯುವ ಸಾಧ್ಯಸಾಧ್ಯತೆ ಕುರಿತು ಪರಿಶೀಲನೆ ನಡೆಸಬೇಕು. ತೆಗೆದ ಹೂಳು ಕೃಷಿ ಬಳಕೆಗೆ ಯೋಗ್ಯವೇ ಎಂಬುದನ್ನು ಕೃಷಿ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಸಲಹೆ ಒದಗಿಸಬೇಕು. ನೀರು ಹರಿಯುವ ಪ್ರಮಾಣ ಕಡಿಮೆ ಇರುವ ಸಂದರ್ಭದಲ್ಲಿ ಕಾಮಗಾರಿಗಳನ್ನು ಕೈಗೊಳ್ಳುವ ಮುಂಚಿತವಾಗಿಯೇ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ಕ್ರೀಯಾಯೋಜನೆ ಸಿದ್ಧಪಡಿಸಿಟ್ಟುಕೊಳ್ಳುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿನ ಡೋಣಿನದಿ ಪ್ರವಾಹ ತಡೆ ಕುರಿತು ಸುರ್ದಿರ್ಘ ಎರಡು ಗಂಟೆಗಳ ಕಾಲ ರೈತರು, ಜಲಬಿರಾದಾರಿ ಸಂಘಟನೆಯವರು, ವಿವಿಧ ಅಧಿಕಾರಿಗಳೊಂದಿಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಲಾಯಿತು.
ಡೋಣಿ ನದಿಯಲ್ಲಿ ಪ್ರವಾಹ ಉಂಟಾಗುವ ವಿವಿಧ ಕಾರಣಗಳ ಕುರಿತು ಕೆಬಿಜೆಎನ್‌ಎಲ್ ಉಪಮುಖ್ಯ ಅಭಿಯಂತರ ಸುಧೀರ ಸಜ್ಜನ ಅವರು ಪಿಪಿಟಿ ಮೂಲಕ ಸಮಗ್ರ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ ಸೋನಾವಣೆ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಕೆಬಿಜೆಎನ್‌ಎಲ್ ನಾರಾಯಣಪುರ ಅಧೀಕ್ಷಕ ಅಭಿಯಂತರ ಮಂಜುನಾಥ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಲ್.ರೂಪಾ, ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ ಕುಂಬಾರ, ಪಿಆರ್‌ಇಡಿ ಕಾರ್ಯನಿರ್ವಾಹಕ ಅಭಿಯಂತರ ನಬಿಲಾಲ ಗಬಸಾವಳಗಿ, ಭೂಮಾಪನ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುಳಗುಂದ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.