ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಂ.೨೪ ಹಾಗೂ ಆಂಗ್ಲ ಮಾಧ್ಯಮ ಬಂಜಾರಾ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಧಾರವಾಢದ ಮಲ್ಲಸಜ್ಜನ ಶಾಲಾ ಆವರಣದಲ್ಲಿ ನಡೆದ ವಿಭಾಗೀಯ ಮಟ್ಟದ ಪ್ರಾಥಮಿಕ ಶಾಲಾ ಹಂತದ ‘ಬಾಸ್ಕೆಟ್ ಬಾಲ್’ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ರಾಜ್ಯ ಮಟ್ಟದ ಬಾಸ್ಕೆಟ್ ಬಾಲ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಿ.ಎಲ್.ಚವ್ಹಾಣ್, ಕಾರ್ಯಾಧ್ಯಕ್ಷರಾದ ಕೆ.ಜಿ.ರಾಠೋಡ, ಕಾರ್ಯದರ್ಶಿ ರಾಜಶೇಖರ ಚವ್ಹಾಣ್, ಶಾಲಾ ಮುಖ್ಯ ಗುರು ಸಂದೀಪ ರಾಠೋಡ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ವಿ.ಆರ್.ಹಾಲವರ, ಟೀಮ್ ವರ್ಕರ್ ಬಾಬುರಾಯ ಹಂಚನಾಳ, ಎಸ್.ಎಲ್.ದೊಡಮನಿ, ಟೀಮ್ ಕೋಚ್ ಎಂ.ಬಿ.ಪಾಟೀಲರು ಸೇರಿದಂತೆ ಶಾಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹರ್ಷವ್ಯಕ್ತಪಡಿಸಿದ್ದಾರೆ.

