ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಪ್ರೌಢ ಶಾಲೆ ಹಾಗೂ ಬಸವೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ಧಾರವಾಢದ ಮಲ್ಲಸಜ್ಜನ ಶಾಲಾ ಆವರಣದಲ್ಲಿ ನಡೆದ ವಿಭಾಗೀಯ ಮಟ್ಟದ ಪ್ರೌಢ ಶಾಲಾ ಹಂತದ ಬಾಸ್ಕೆಟ್ ಬಾಲ್ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ರಾಜ್ಯ ಮಟ್ಟದ ಬಾಸ್ಕೆಟ್ ಬಾಲ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಜಿಲ್ಲೆಯ ಹಾಗೂ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳ ಈ ಸಾಧನೆಗೆ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಿ.ಎಲ್.ಚವ್ಹಾಣ್, ಕಾರ್ಯಾಧ್ಯಕ್ಷ ಕೆ.ಜಿ.ರಾಠೋಡ, ಕಾರ್ಯದರ್ಶಿ ರಾಜಶೇಖರ ಚವ್ಹಾಣ್, ಶಾಲಾ ಮುಖ್ಯ ಗುರು ಇ.ಡಿ.ಲಮಾಣಿ, ಬಸವೇಶ್ವರ ಪ್ರೌಢ ಶಾಲೆಯ ಮುಖ್ಯ ಗುರು ಪರಶುರಾಮ ಲಮಾಣಿ, ದೈಹಿಕ ಶಿಕ್ಷಣ ಶಿಕ್ಷಕ ಎಸ್.ಎಲ್.ದೊಡಮನಿ ಹಾಗೂ ಬಾಬುರಾಯ ಹಂಚನಾಳ, ಟೀಮ್ ಕೋಚ್ ಎಂ.ಬಿ.ಪಾಟೀಲ, ಸೇರಿದಂತೆ ಶಾಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

