ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಕ್ತದಾನ ಶ್ರೇಷ್ಠದಾನವಾಗಿದ್ದು, ಕಷ್ಟದಲ್ಲಿರುವವರಿಗೆ ಮರುಜೀವ ನೀಡುತ್ತದೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಸಹಾಯಕ ಕಾನೂನು ಸಲಹೆಗಾರ ಸೂರ್ಯಕಾಂತ ಬಿರಾದಾರ ಹೇಳಿದ್ದಾರೆ.
ಸೋಮವಾರ ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯ ರಕ್ತ ಭಂಡಾರದಲ್ಲಿ ಶ್ರೀ ಬಿ. ಎಂ. ಪಾಟೀಲ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ರಕ್ತದಾನದಿಂದ ಕೇವಲ ರೋಗಿಗೆ ಮರುಜೀವ ನೀಡುವುದು ಮಾತ್ರವಲ್ಲ, ದಾನಿಯೂ ಆರೋಗ್ಯದಿಂದ ಇರಲು ಸಹಾಯವಾಗುತ್ತದೆ. ರಕ್ತದಲ್ಲಿರುವ ಕೆಟ್ಟ ಕೊಬ್ಬನ್ನು ಹೊರಗೆ ಹಾಕಲು ಇದು ಸಹಕಾರಿಯಾಗಿದೆ. ಒಬ್ಬ ಆರೋಗ್ಯವಂತ ವ್ಯಕ್ತಿ ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವ ಮೂಲಕ ಆರೋಗ್ಯದಿಂದ ಇರಬಹುದಾಗಿದೆ ಎಂದು ಅವರು ಹೇಳಿದರು.
ಈ ಶಿಬಿರದಲ್ಲಿ 20 ಜನರು ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೋನ್ ಚೋಪಡೆ, ಡಾ. ಪ್ರಕಾಶ ಪಾಟೀಲ, ಸಂತೋಷ ಮಸಳಿ, ಚಂದ್ರಕಾಂತ ಡಾ. ಅಪ್ಪನಗೌಡ ಪಾಟೀಲ, ಡಾ. ಅಮಿತಕುಮಾರ ಬಿರಾದಾರ, ಡಾ. ಸತೀಶ ನಡಗಡ್ಡಿ, ಡಾ. ಸಂಕಪ್ಪ ಗುಲಗಂಜಿ, ಕಿರಣ ಶಿರೋಳಕರ, ನವೀನ ಗಿರಡಿಮಠ, ಶಂಕರ್ ಬಿರಾದಾರ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ಹಾಗೂ ಕಾಲೆಜು ಸಿಬ್ಬಂದಿ ಉಪಸ್ಥಿತರಿದ್ದರು.

