ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ತಾಲೂಕಿನ ಗೋಲಗೇರಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸ್ಥಾಯಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅವರಿಗೆ ಸನ್ಮಾನಿಸಿ ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಬಸವರಾಜ ಮಾರಲಭಾವಿ, ಯುವ ಮುಖಂಡರಾದ ಮಡಿವಾಳ ನಾಯ್ಕೋಡಿ, ಶಂಕರ ಬೋರಗಿ, ಶರಣಗೌಡ ಬಿರಾದಾರ, ಶ್ರೀಶೈಲ ಹಿಪ್ಪರಗಿ ಬಸವರಾಜ ಜಂಬಗಿ ಶಾಂತಗೌಡ ಬಿರಾದಾರ ಸೇರಿದಂತೆ ಮತ್ತಿತ್ತರು ಇದ್ದರು.

