ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೪-೨೫ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ೫,೦೦೦ರೂಗಳ ಆರ್ಥಿಕ ನೆರವನ್ನು ನೀಡುವ ಸಲುವಾಗಿ ವಿದ್ಯುತ್ ಮಗ್ಗ ಮತ್ತು ಮಗ್ಗಪೂರ್ವ ಘಟಕದ ಮಾಲೀಕರು ಹಾಗೂ ಸದರಿ ಘಟಕಗಳಲ್ಲಿ ಕಾರ್ಯನಿರ್ವಹಿಸುತತಿರುವ ಅರ್ಹ ಕಾರ್ಯನಿರತ ವಿದ್ಯುತ್ ಮಗ್ಗ ನೇಕಾರರನ್ನು ಈಗಾಗಲೇ ಕಳೆದ ಸಾಲಿನಲ್ಲಿ ನೇಕಾರ ಸಮ್ಮಾನ್ (ವಿದ್ಯುತ್ ಮಗ್ಗ) ಯೋಜನೆಯಡಿ ಸೇವಾಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿದ ವಿದ್ಯುತ್ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಲ್ಲಿ ಕೆಲಸ ಮಾಡುತ್ತಿರುವ ನೇಕಾರರಿಮದ ಹೊಸದಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿಜಯಪುರ ಜಿಲ್ಲೆಯ ನೇಕಾರರು ನಿಗಧಿತ ಅರ್ಜಿ ನಮೂನೆಯೊಂದಿಗೆ ಘಟಕದ ಮಾಲೀಕರಿಂದ ಮುಚ್ಚಳಿಕೆ ಪತ್ರ, ಘಟಕದ ಮಾಲೀಕರ/ನೇಕಾರರ ಆಧಾರ್ ಲಿಂಕ್ ಬ್ಯಾಂಕ್ ಪಾಸ್‌ಬುಕ್ ಪ್ರತಿ, ವಿದ್ಯುತ್ ಮಗ್ಗ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಫಲಾನುಭವಿಯ ಫೋಟೋ, ವಿದ್ಯುತ್ ಸಂಪರ್ಕ ಹೊಂದಿರುವ ಆರ್.ಆರ್. ಸಂಖ್ಯೆಯ ಇತ್ತಿಚೀನ ವಿದ್ಯುತ್ ಬಿಲ್, ಘಟಕದ ಉದ್ಯೋಗ ಆಧಾರ್/ಪಿ.ಎಂ.ಟಿ ಉದ್ದಿಮೆದಾರರ ಪರವಾನಿಗೆ ಪತ್ರದ ಪ್ರತಿ, ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ನೇಕಾರರ ವಿವರಗಳನ್ನು ಒಳಗೊಂಡ ಮಜೂರಿಯ ಪಾವತಿಯ ಪ್ರತಿಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ೨೫-೧೦-೨೦೨೪ ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕೈ ಮಗ್ಗ ಮತ್ತು ಜವಳಿ ಇಲಾಖೆ, ಕೈಗಾರಿಕೆ ಕೇಂಧ್ರ ಆವರಣ ಶಿಖಾರಖಾನ ವಿಜಯಪುರ ಅಥವಾ ಮೊಬೈಲ್ ಸಂಖ್ಯೆ ೯೯೦೨೫೬೧೪೪೧ನ್ನು ಸಂಪರ್ಕಿಸಬಹುದು ಎಂದು ಕೈ ಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
