Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಯದ ಮೊದಲ ಹೆಜ್ಜೆ ಧೈರ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 15, 2026

ಜು.೧೮ ರಂದು “ಅಂಕುರ” ಸ್ವಾಗತ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಕ್ಫ್ ಅದಾಲತ್‌ನಲ್ಲಿ ಸಲ್ಲಿಕೆಯಾದ ಅರ್ಜಿಗಳಿಗೆ ಶೀಘ್ರದಲ್ಲೇ ಪರಿಹಾರ
(ರಾಜ್ಯ ) ಜಿಲ್ಲೆ

ವಕ್ಫ್ ಅದಾಲತ್‌ನಲ್ಲಿ ಸಲ್ಲಿಕೆಯಾದ ಅರ್ಜಿಗಳಿಗೆ ಶೀಘ್ರದಲ್ಲೇ ಪರಿಹಾರ

By No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುತವಲ್ಲಿಗಳ ಸಮ್ಮೇಳನ-ವಕ್ಫ್ ಅದಾಲತ್ ಕಾರ್ಯಕ್ರಮ | ಸಚಿವ ಜಮೀರ ಅಹ್ಮದ್‌ಖಾನ್ ಭರವಸೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ನಮಗೆ ಒದಗಿಸಿದ ಸಂವಿಧಾನದಿಂದಲೇ ಇಂದು ನಾವು ಅತ್ಯಂತ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ. ಪ್ರತಿಯೊಬ್ಬರಿಗೂ ತಮ್ಮ ಹಕ್ಕು ಪ್ರತಿಪಾದನೆಗೆ ಸಂವಿಧಾನ ಅವಕಾಶ ಒದಗಿಸಿದ್ದು, ವಕ್ಫ್ ಆಸ್ತಿ ಯಾವುದೇ ವೈಯಕ್ತಿಕ ಸ್ವತ್ತಲ್ಲ, ಇದು ದೇವರ ಆಸ್ತಿ ಇದರ ಸಂರಕ್ಷಣೆ ನಮ್ಮ ಹಕ್ಕು ಹಾಗೂ ಜವಾಬ್ದಾರಿಯಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಜೆಡ್.ಜಮೀರ್‌ಅಹ್ಮದ ಖಾನ್ ಹೇಳಿದರು.
ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ವಕ್ಫ್ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಸಹಯೋಗದಲ್ಲಿ ಜಿಲ್ಲೆಯ ಮುತ್ತವಲ್ಲಿಗಳ ಸಮ್ಮೇಳನ ಹಾಗೂ ವಕ್ಫ್ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ವಕ್ಫ ಆಸ್ತಿ ಸಂರಕ್ಷಣೆ ಹಾಗೂ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಈವರೆಗೆ ರಾಜ್ಯದಾದ್ಯಂತೆ ೧೦ ಜಿಲ್ಲೆಗಳಲ್ಲಿ ವಕ್ಫ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಇಂದು ವಿಜಯಪುರದಲ್ಲಿ ೧೧ನೇ ಅದಾಲತ್ ಹಮ್ಮಿಕೊಳ್ಳಲಾಗಿದೆ. ಕಳೆದ ೧೦-೧೫ ವರ್ಷಗಳಿಂದ ಬಾಕಿ ಉಳಿದ ವಖ್ಫ್ ಖಾತೆ ಬದಲಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾನು ಸಚಿವನಾದ ಮೇಲೆ ೭೨೭ ಖಾತೆ ಬದಲಾವಣೆಗೆ ಕ್ರಮ ವಹಿಸಲಾಗಿದೆ ಎಂದು ಅವರು ಹೇಳಿದರು.
ವಿಜಯಪುರದಲ್ಲಿ ಹಮ್ಮಿಕೊಂಡ ಅದಾಲತ್‌ನಲ್ಲಿ ವಕ್ಫ್ ಆಸ್ತಿಗಳ ಅತಿಕ್ರಮಣದ ೧೭ ಅರ್ಜಿಗಳು, ಖಬರಸ್ಥಾನ (ಸ್ಮಶಾನ)ಕ್ಕೆ ಸಂಬಂಧಿಸಿದ್ದು, ಖಾತೆ ಬದಲಾವಣೆಯ ೮೧ ಅರ್ಜಿಗಳು, ಸರ್ವೇ ಕಾರ್ಯಕ್ಕಾಗಿ ೨೫ ಅರ್ಜಿಗಳು ಸೇರಿದಂತೆ ಒಟ್ಟು ೩೩೦ ಅರ್ಜಿಗಳು ಸಲ್ಲಿಕೆಯಾಗಿವೆ. ಇಲ್ಲಿ ಸಲ್ಲಿಕೆಯಾದ ಅರ್ಜಿಗಳು ಯಾವುದೇ ಕಾರಣಕ್ಕೂ ವ್ಯರ್ಥವಾಗುವುದಿಲ್ಲ, ಪ್ರತಿಯೊಂದು ಅರ್ಜಿಗಳಿಗೂ ಸ್ಪಂದಿಸಲಾಗುವುದು. ಸ್ವೀಕರಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ನಾಳೆಯೇ ಸಭೆ ನಡೆಸಿ, ಅಧಿಕಾರಿಗಳಿಗೆ ಒಂದು ತಿಂಗಳ ಕಾಲಾವಕಾಶ ಒದಗಿಸಿ ನಿಗದಿತ ಅವಧಿಯಲ್ಲಿಯೇ ಈ ಅರ್ಜಿಗಳ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.
ಹಣಕಾಸು ಇಲಾಖೆಗೆ ಮರಳಿ ಹೋದ ವಕ್ಫ್ ಅನುದಾನವನ್ನು ನಾನು ಸಚಿವನಾದ ಮೇಲೆ ಮತ್ತೇ ಮರಳಿ ಪಡೆಯಲಾಗಿದೆ. ಯಾವುದೇ ಸಮಾಜದ ಅಭಿವೃದ್ದಿಯಾಗಬೇಕಾದರೆ ಶಿಕ್ಷಣ ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಈ ಅನುದಾನವನ್ನು ಬಳಸಿಕೊಂಡು ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ, ರಾಜ್ಯದ ೧೫ ಜಿಲ್ಲೆಗಳಲ್ಲಿ ವಕ್ಫ್ ಮಂಡಳಿಯಿದ ಪಿಯು ಕಾಲೇಜ್ ನಿರ್ಮಾಣ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲ ಪ್ರತಿಯೊಂದು ಜಿಲ್ಲೆಗಳಲ್ಲಿ ಕಾಲೇಜ್ ನಿರ್ಮಾಣದ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.
ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ಅತಿ ಹೆಚ್ಚು ಶಿಕ್ಷಣಕ್ಕಾಗಿ ಒತ್ತು ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ಸ್ಥಗಿತಗೊಂಡಿದ್ದ ವಿದ್ಯಾರ್ಥಿವೇತನ ಪುನ ಒದಗಿಸಲಾಗುತ್ತಿದೆ. ಇಡೀ ದೇಶದಲ್ಲಿಯೇ ಮಾದರಿಯಾದ ಹಜ್ ಭವನ ಕರ್ನಾಟಕದಲ್ಲಿ ನಿರ್ಮಿಸಲಾಗಿದೆ. ಸಮಾಜದ ಮಕ್ಕಳು ಉನ್ನತ ಶಿಕ್ಷಣ ಪಡೆದು, ಉನ್ನತ ಹುದ್ದೆ ಪಡೆಯಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದಿಂದ ೧೩೦೦ ವಿದ್ಯಾರ್ಥಿಗಳಿಗೆ ನೆರವು ಒದಗಿಸಲಾಗಿದೆ. ವಿದೇಶದಲ್ಲಿ ವ್ಯಾಸಂಗಕ್ಕಾಗಿ ನೆರವು ಒದಗಿಸಲಾಗುತ್ತಿದೆ. ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ವಾಹನ ಖರೀದಿಗೆ ಸಬ್ಸಿಡಿ ಒದಗಿಸಲಾಗುತ್ತಿದೆ. ಮದರಸಾಗಳಲ್ಲಿ ಶಿಕ್ಷಕರನ್ನು ನೇಮಕ ಮಾಡಿ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ. ಹಜ್ ಭವನದಲ್ಲಿ ೪೦೦ ವಿದ್ಯಾರ್ಥಿಗಳಿಗೆ ಐಎಎಸ್, ಐಪಿಎಸ್, ಕೆಎಎಸ್ ತರಬೇತಿ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ ಜಬ್ಬಾರ, ಸಿಂದಗಿ ಶಾಸಕರಾದ ಅಶೋಕ ಮನಗೂಳಿ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಅಧ್ಯಕ್ಷ ಅನ್ವರಬಾಶಾ ಮಾತನಾಡಿದರು.
ಮೌಲಾನಾ ತನ್ವೀರ ಪೀರಾ ಹಾಸ್ಮೀ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು.
ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

” ರಾಜ್ಯದಲ್ಲಿಯೇ ವಿಜಯಪುರದಲ್ಲಿ ಅತಿ ಹೆಚ್ಚು ವಕ್ಫ್ ಆಸ್ತಿ ಹೊಂದಿದೆ. ವಕ್ಫ್ ಆಸ್ತಿಯ ಸದ್ಭಳಕೆ ಮಾಡಿಕೊಂಡು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೂರು ಕಲ್ಪಿಸುವ ಸದುದ್ದೇಶ ಹೊಂದಲಾಗಿದೆ. ರಾಜ್ಯದಲ್ಲಿ ಒಟ್ಟು ೧.೧೨ ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ ೮೫ ಸಾವಿರ ಎಕರೆ ಅತಿಕ್ರಮಣವಾಗಿ ಕೇವಲ ೨೩೦೦೦ ಎಕರೆ ಮಾತ್ರ ಉಳಿದಿದೆ. ವಕ್ಫ್ ಆಸ್ತಿ ಕಬಳಿಕೆ- ಹಗರಣಕ್ಕೆ ಮುಂದಾಗಬಾರದು. ವಕ್ಫ್ ಆಸ್ತಿ ದೇವರ ಆಸ್ತಿ, ಇದರ ಸಂರಕ್ಷಣೆ ನಮ್ಮ ಜವಾಬ್ದಾರಿಯಾಗಿದ್ದು, ಪ್ರತಿಯೊಬ್ಬರು ವಕ್ಫ್ ಆಸ್ತಿ ಸಂರಕ್ಷಣೆಗೆ ಮುಂದಾಗಬೇಕು.”
– ಬಿ.ಜೆಡ್.ಜಮೀರ್‌ಅಹ್ಮದ ಖಾನ್
ಸಚಿವರು, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ

ವಕ್ಫ್ ಅದಾಲತ್‌ಗಳನ್ನು ಹಮ್ಮಿಕೊಳ್ಳುವ ಮೂಲಕ ಗ್ರಾಮ, ತಾಲೂಕಾ ಮಟ್ಟದ ಹಾಗೂ ಜಿಲ್ಲಾ ಮಟ್ಟದಲ್ಲಿರುವ ವಿವಿಧ ವಕ್ಫ್ ಸಮಸ್ಯೆ, ಸ್ಮಶಾನ ಜಾಗದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಅದಾಲತ್ ಹಮ್ಮಿಕೊಂಡು ಪರಿಹರಿಸಲಾಗುತ್ತಿರುವ ಅತ್ಯಂತ ಶ್ಲಾಘನೀಯವಾಗಿದೆ. ಸಮಾಜದಲ್ಲಿನ ಪ್ರತಿಯೊಂದು ಸಮಸ್ಯೆಗೆ ಪರಿಹಾರ ಕಲ್ಪಿಸಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಅಂಜುಮನ್ ಸಂಸ್ಥೆ ಸೇರಿದಂತೆ ಸಮಾಜದ ಮುಖಂಡರು, ಜನಪ್ರತಿನಿಧಿಗಳು ಮುಂದಾಗಬೇಕು. ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸಬೇಕು. ವಕ್ಫ್ ಆಸ್ತಿ ದೇವರ ಆಸ್ತಿ, ದೇವರ ಆಸ್ತಿಯಲ್ಲಿ ವೈಮನಸ್ಸು ಬರಬಾರದು. ಎಲ್ಲರೂ ಸಮನ್ವಯತೆಯಿಂದ, ಸಹೋದರಂತೆ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು, ತಿದ್ದಿಕೊಂಡು ಮುನ್ನಡೆಯಬೇಕು.”
– ಸಿ.ಎಸ್. ನಾಡಗೌಡ
ಅಧ್ಯಕ್ಷರು, ಕರ್ನಾಟಕ ಸಾಬೂನು-ಮಾರ್ಜಕ ಅಭಿವೃದ್ಧಿ ನಿಗಮ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಯದ ಮೊದಲ ಹೆಜ್ಜೆ ಧೈರ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 15, 2026

ಜು.೧೮ ರಂದು “ಅಂಕುರ” ಸ್ವಾಗತ ಕಾರ್ಯಕ್ರಮ

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಯದ ಮೊದಲ ಹೆಜ್ಜೆ ಧೈರ್ಯ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 15, 2026
    In ದಿನಪತ್ರಿಕೆ
  • ಜು.೧೮ ರಂದು “ಅಂಕುರ” ಸ್ವಾಗತ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಶಿಷ್ಟವಾಗಿ ಜರುಗಿದ ಪಂಡರಪುರ ಸೈಕಲ್ ವಾರಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.