ಉದಯರಶ್ಮಿ ದಿನಪತ್ರಿಕೆ
ಕಲಕೇರಿ: ಗ್ರಾಮದ ಶ್ರೀ ಭವಾನಿ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಶ್ರೀ ದೇವಿಯ ಮೂರ್ತಿಗೆ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಯಿತು.
ಇದೇ ವೇಳೆ ದೇವಸ್ಥಾನದ ಕಮೀಟಿ ಮತ್ತು ದೇವಿ ಉಪಾಸಕರಾದ ಮೋತಿಲಾಲ ಕುಲಕರ್ಣಿ ಅವರ ಸಂಕಲ್ಪದಂತೆ ೧೦೦೧ ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಹಿರೂರ ಹಿರೇಮಠದ ಜಯಸಿದ್ಧೇಶ್ವರ ಶಿವಾಚಾರ್ಯರ ಸಮ್ಮುಖದಲ್ಲಿ ಸುಮಂಗಲೆಯರಿಗೆ ಉಡಿ ತುಂಬುವ ಕಾರ್ಯಕ್ಕೆ ಚಾಲನೆ ನೀಡಲಾಯಿತು ಮತ್ತು ಸುಮಂಗಲೆಯರಿಗೆ ವಿಶೇಷವಾದ ಪ್ರಸಾದದ ವ್ಯವಸ್ಥೆ ಮಾಡಲಾಯಿತು.

